ಉತ್ತರ ಕನ್ನಡ: ಉತ್ತರ ಕನ್ನಡ ಜಿಲ್ಲೆಯಲ್ಲಿ ಕರಿ ಚಿರತೆ ಕಾಣಿಸಿಕೊಂಡಿದ್ದು, ದಿನದಿಂದ ದಿನಕ್ಕೆ ಚಿರತೆ ಹಾವಳಿ ಹೆಚ್ಚಾಗ್ತಿದೆ ಎಂದು ಜನರು ಭಯಭೀತರಾಗಿದ್ದಾರೆ.
ಸಿದ್ದಾಪುರ ತಾಲೂಕಿನ ಮುಸೆಗಾರ ಎಂಬ ಗ್ರಾಮದ ಮನೆ ಅಂಗಳದಲ್ಲಿ ರಾತ್ರಿ ಸಮಯದಲ್ಲಿ ಕರಿ ಚಿರತೆ ಪ್ರತ್ಯಕ್ಷವಾಗಿದ್ದು, ಈ ಬಾರಿಯ ಸೇರಿ 3 ಬಾರಿಗೆ ಅದೇ ಸ್ಥಳದಲ್ಲಿ ಚಿರತೆ ಕಾಣಿಸಿಕೊಂಡಿದೆ. ಕಳೆದ ಕೆಲ ದಿನಗಳ ಹಿಂದೆ ಎರಡು ಬಾರಿ ಚಿರತೆ ಇದೆ ಜಾಗದಲ್ಲಿ ಕಾಣಿಸಿಕೊಂಡಿದ್ದ ಹಿನ್ನೆಲೆ ಎಲ್ಲರೂ ಗಾಬರಿಗೊಂಡಿದ್ದಾರೆ. ಪ್ರತಿ ಬಾರಿಯೂ ತಲಾ ಒಂದು ನಾಯಿಯನ್ನು ಹೊತ್ತೊಯ್ದಿದ್ದ ಕರಿಚಿರತೆ ಓಡಾಟದ ದೃಶ್ಯ ಇದೀಗ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದ್ದು, ಚಿರತೆ ಸೆರೆಗೆ ಗ್ರಾಮಸ್ಥರು ಅರಣ್ಯ ಇಲಾಖೆ ಅಧಿಕಾರಿಗಳಿಗೆ ಮನವಿ ಮಾಡಿದ್ದಾರೆ. ವಿಶೇಷ ಟಾಸ್ಕ್ ಫೋರ್ಸ್ ನಿಯೋಜನೆ ಮಾಡಿ ತ್ವರಿತವಾಗಿ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದ್ದಾರೆ . ಸದ್ಯ ಕರಿ ಚಿರತೆ ಓಡಾಟದ ವಿಡಿಯೋ ಎಲ್ಲೆಡೆ ವೈರಲ್ ಆಗಿದೆ.