ಬೆಂಗಳೂರು: ತಮಿಳುನಾಡಿಗೆ ಕಾವೇರಿ ನೀರು ಬಿಡುಗಡೆ ವಿಚಾರಕ್ಕೆ ಸಂಬಂಧಿಸಿದಂತೆ ಕಾವೇರಿ ರಕ್ಷಣಾ ಯಾತ್ರೆಗೆ ವಿಪಕ್ಷ ಬಿಜೆಪಿ ಮುಂದಾಗಿದೆ. ಬಿಜೆಪಿ ನಾಯಕರು ಮೂರು ತಂಡಗಳಲ್ಲಿ ಮಂಡ್ಯ, ಮೈಸೂರು, ಚಾಮರಾಜನಗರ, ಕೊಡಗು, ರಾಮನಗರ ಮತ್ತು ಹಾಸನ ಜಿಲ್ಲೆಗಳಲ್ಲಿ ಪ್ರವಾಸ ಮಾಡಲಿದೆ. ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಕಾವೇರಿ ಹೋರಾಟ ನಡೆಯಲಿದೆ. ಯಾತ್ರೆ ಕುರಿತು ಸೆಪ್ಟೆಂಬರ್ 15 ರಂದು ಬೆಂಗಳೂರಿನಲ್ಲಿ ಸಭೆ ನಡೆಯಲಿದೆ.