ಕಾಂಗ್ರೆಸ್ ಸರ್ಕಾರದ ಮಹತ್ವಕಾಂಕ್ಷಿ ಯೋಜನೆಗಳಲ್ಲೊಂದಾದ ಗೃಹಲಕ್ಷ್ಮಿ ಯೋಜನೆಗೆ ರಕ್ಷಾ ಬಂಧನದ ದಿನ ಮೈಸೂರಿನಲ್ಲಿ ರಾಹುಲ್ ಗಾಂಧಿಯವರ ನೇತೃತ್ವದಲ್ಲಿ ಅದ್ಧೂರಿ ಚಾಲನೆ ಸಿಕ್ಕಿತ್ತು. ಆ ಬಳಿಕ ಅನೇಕ ಮಹಿಳೆಯರ ಖಾತೆಗೆ 2 ಸಾವಿರ ರೂ ಜಮೆಯಾಗಿತ್ತು. ಆದರೆ ಕೆಲ ಮನೆ ಒಡತಿಯರು ತಮ್ಮ ಖಾತೆಗೆ ಹಣ ಬಂದಿಲ್ಲ ಎಂದು ಚಿಂತಿಸುತ್ತಿದ್ದರು. ಸದ್ಯ ಈಗ ಸರ್ಕಾರ ಗೃಹಲಕ್ಷ್ಮೀ ಯೋಜನೆಯ ಮೊದಲ ಕಂತಿನ ಹಣ ಬಿಡುಗಡೆ ಮಾಡಲಾಗಿದೆ. ಈ ಮೂಲಕ ನಿಮ್ಮ ಖಾತೆಯ ಮಾಹಿತಿ ಎಲ್ಲವೂ ಸರಿಯಾಗಿದ್ದು ನಿಮ್ಮ ಅರ್ಜಿ ಕೂಡ ಸ್ವೀಕಾರವಾಗಿದ್ರೆ ಯಾರಿಗೆ ಈ ತಿಂಗಳ ಹಣ ಬಂದಿಲ್ಲವೂ ಅವರಿಗೆ ಎರಡು ತಿಂಗಳ ಹಣ ಒಟ್ಟಿಗೆ ಬರಲಿದೆ.
ಗೃಹಲಕ್ಷ್ಮಿ ಯೋಜನೆಗಾಗಿ ರಾಜ್ಯ ಸರ್ಕಾರವು ಮಹಿಳಾ&ಮಕ್ಕಳ ಕಲ್ಯಾಣ ಇಲಾಖೆಗೆ ಹಣ ಬಿಡುಗಡೆ ಮಾಡಿದೆ. ಮೊದಲ ಕಂತಿನಲ್ಲಿ 4,600 ಕೋಟಿ ರೂ. ಬಿಡುಗಡೆ ಮಾಡಿದೆ. 2023-24ನೇ ಸಾಲಿನಲ್ಲಿ 17,500 ಕೋಟಿ ರೂ. ನಿಗದಿಪಡಿಸಲಾಗಿತ್ತು. ಇದೀಗ ಮೊದಲ ಕಂತಿನ ಹಣ ಬಿಡುಗಡೆ ಮಾಡಿಲಾಗಿದೆ. ಆಗಸ್ಟ್, ಸೆಪ್ಟೆಂಬರ್ ತಿಂಗಳ ಅವಧಿಗೆ 4,600 ಕೋಟಿ ರೂ. ಬಿಡುಗಡೆ ಮಾಡಲಾಗಿದೆ.