ಮಂಡ್ಯ ಸೆ.17: ಬೆಂಗಳೂರು-ಮೈಸೂರು ದಶಪಥ ಹೆದ್ದಾರಿಯಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿ ಕಾರಿನಲ್ಲಿದ್ದ ಅನೇಕಲ್ ಮೂಲದ ಕಿಶೋರ್ ಬಾಬು (47) ಮೃತಪಟ್ಟಿದ್ದಾರೆ.ನಾಲ್ವರಿಗೆ ಗಾಯಗಾಳಾಗಿದ್ದು ಮೈಸೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಮಂಡ್ಯ (Mandya) ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ನಗುವನಹಳ್ಳಿ ಬಳಿ ಘಟನೆ ನಡೆದಿದೆ.
ಬೆಂಗಳೂರಿನಿಂದ ಮೈಸೂರು ಕಡೆಗೆ ಹೊರಟಿದ್ದ ಕಾರು ಹಿಂಬದಿಯಿಂದ ಅಪರಿಚಿತ ವಾಹನಕ್ಕೆ ಡಿಕ್ಕಿ ಹೊಡೆದಿದೆ. ಕೂಡಲೆ ಸ್ಥಳದಲ್ಲಿದ್ದ ಪೊಲೀಸರು ಮತ್ತು ಸ್ಥಳೀಯರು ನಾಲ್ವರನ್ನು ರಕ್ಷಣೆ ಮಾಡಿದ್ದಾರೆ. ಬಳಿಕ ಕಾರು ನೋಡು ನೋಡುತ್ತಿದ್ದಂತೆ ಹೊತ್ತಿ ಉರಿದಿದೆ. ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿ ನಂದಿಸಿದ್ದಾರೆ. ಶ್ರೀರಂಗಪಟ್ಟಣ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕಾರಣ ದಾಖಲಾಗಿದೆ.