ಪ್ರಧಾನಿ ಮೋದಿ ಇಂದು 9 ವಂದೇ ಭಾರತ್ ರೈಲುಗಳಿಗೆ ಚಾಲನೆ ನೀಡಲಿದ್ದಾರೆ. ಕರ್ನಾಟಕ ಸೇರಿದಂತೆ 11 ರಾಜ್ಯಗಳಲ್ಲಿ ಈ ವಂದೇ ಭಾರತ್ ರೈಲುಗಳು ಚಲಿಸಲಿವೆ. ಮಧ್ಯಾಹ್ನ 12:30ಕ್ಕೆ ವಿಡಿಯೋ ಕಾನ್ಫರೆನ್ಸ್ ಮೂಲಕ 9 ವಂದೇ ಭಾರತ್ ರೈಲುಗಳಿಗೆ ಚಾಲನೆ ನೀಡಲಿದ್ದಾರೆ. ಈ ವಂದೇ ಭಾರತ್ ರೈಲುಗಳು ತಮ್ಮ ಕಾರ್ಯಾಚರಣೆಯ ಮಾರ್ಗಗಳಲ್ಲಿ ಅತ್ಯಂತ ವೇಗದ ರೈಲು ಆಗಿರುತ್ತವೆ ಮತ್ತು ಪ್ರಯಾಣಿಕರ ಗಣನೀಯ ಸಮಯವನ್ನು ಉಳಿಸಲು ಸಹಾಯ ಮಾಡುತ್ತದೆ.
ಪ್ರಧಾನಿ ಮೋದಿ ಇಂದು ಮಧ್ಯಾಹ್ನ 12:30ಕ್ಕೆ ವಿಡಿಯೋ ಕಾನ್ಫರೆನ್ಸ್ ಮೂಲಕ 11 ರಾಜ್ಯಗಳಲ್ಲಿ ಸಂಚರಿಸುವ 9 ವಂದೇ ಭಾರತ್ ರೈಲುಗಳಿಗೆ ಚಾಲನೆ ನೀಡಿದ್ದಾರೆ. ಈ ಪೈಕಿ ರಾಜ್ಯದಲ್ಲಿ ಸಂಚರಿಸುವ ಬೆಂಗಳೂರು – ಹೈದರಾಬಾದ್ ರೈಲು ಸಹ ಒಂದು. ಈ ಒಂಬತ್ತು ರೈಲುಗಳು ಹನ್ನೊಂದು ರಾಜ್ಯಗಳಾದ ರಾಜಸ್ಥಾನ, ತಮಿಳುನಾಡು, ತೆಲಂಗಾಣ, ಆಂಧ್ರಪ್ರದೇಶ, ಕರ್ನಾಟಕ, ಬಿಹಾರ, ಪಶ್ಚಿಮ ಬಂಗಾಳ, ಕೇರಳ, ಒಡಿಶಾ, ಜಾರ್ಖಂಡ್ ಮತ್ತು ಗುಜರಾತ್ಗಳಲ್ಲಿ ಸಂಪರ್ಕವನ್ನು ಹೆಚ್ಚಿಸುತ್ತವೆ. ಅಲ್ಲದೆ, ಈ ರೈಲುಗಳಿಂದ ಪ್ರಯಾಣಿಕರಿಗೆ ಸಾಕಷ್ಟು ಸಮಯ ಉಳಿತಾಯವೂ ಆಗುತ್ತದೆ.