- ತಮಿಳುನಾಡಿಗೆ ಕಾವೇರಿ ನೀರು ಹರಿಸುತ್ತಿರುವುದನ್ನು ಖಂಡಿಸಿ ನಾಳೆ ಮೈಸೂರು ಜಿಲ್ಲೆ ಟಿ.ನರಸೀಪುರ ಪಟ್ಟಣ ಬಂದ್ಗೆ ಕರೆ ನೀಡಲಾಗಿದೆ. ಟಿ.ನರಸೀಪುರದ ಕಬಿನಿ ಅತಿಥಿ ಗೃಹದಲ್ಲಿ ನಡೆದ ಸಭೆಯಲ್ಲಿ ನಿರ್ಧಾರ ಮಾಡಲಾಗಿದ್ದು ನಾಳೆ ಬಂದ್ಗೆ ಕಾವೇರಿ ಕಬಿನಿ ಹಿತರಕ್ಷಣಾ ಸಮಿತಿ ಕರೆ ಕೊಟ್ಟಿದೆ. ರಾಜ್ಯ ರೈತ ಸಂಘ, ಕಬ್ಬು ಬೆಳೆಗಾರರ ಸಂಘ, ಕನ್ನಡಪರ ಸಂಘಟನೆ, ವರ್ತಕರು ಸೇರಿ 20ಕ್ಕೂ ಹೆಚ್ಚು ಸಂಘಟನೆಗಳು ಭಾಗಿಯಾಗಲಿವೆ.
Leave a comment