ತಮಿಳುನಾಡಿಗೆ ಕಾವೇರಿ ನೀರು ಹರಿಸುತ್ತಿರುವುದನ್ನು ವಿರೋಧಿಸಿ ಇಂದು ‘ಬೆಂಗಳೂರು ಬಂದ್’ ಮಾಡಲಾಗಿದೆ. ಪರಿಣಾಮ ಶಾಲಾ-ಕಾಲೇಜುಗಳು ಸಂಪೂರ್ಣ ಬಂದ್ ಆಗಲಿದ್ದು, ಸಾರಿಗೆ ಸಂಚಾರ, ಮಾರುಕಟ್ಟೆ ಸೇವೆಯಲ್ಲಿ ವ್ಯತ್ಯಯ ಉಂಟಾಗಿದೆ. ‘ಕರ್ನಾಟಕ ಜಲ ಸಂರಕ್ಷಣಾ ಸಮಿತಿ ಬೆಂಗಳೂರು’ ಸಂಘಟನೆ ನೇತೃತ್ವದಲ್ಲಿ ಬೆಳಗ್ಗೆ 6 ರಿಂದ ಸಂಜೆ 6 ಗಂಟೆವರೆಗೆ ಬಂದ್ ಇರಲಿದೆ. ಇದಕ್ಕೆ ಕನ್ನಡಪರ, ರೈತಪರ ಸಂಘಟನೆಗಳು, ಸಾರಿಗೆ, ಶಿಕ್ಷಕರ ಸಂಘಟನೆಗಳು, 150ಕ್ಕೂ ಹೆಚ್ಚಿನ ಸಂಘ ಸಂಸ್ಥೆಗಳು ಪೂರ್ಣ ಬೆಂಬಲ ನೀಡಿವೆ. ಎಫ್ಕೆಸಿಸಿಐ, ಬೀದಿ ಬದಿ ವ್ಯಾಪಾರಸ್ಥರು ಸೇರಿ 50ಕ್ಕೂ ಹೆಚ್ಚು ಸಂಘಟನೆಗಳು ನೈತಿಕ ಬೆಂಬಲ ವ್ಯಕ್ತಪಡಿಸಿವೆ. ಇನ್ನು ಮಧ್ಯರಾತ್ರಿಯಿಂದಲೇ ನಗರದಲ್ಲಿ 144 ಸೆಕ್ಷನ್ ಜಾರಿ ಮಾಡಲಾಗಿದೆ. ಪೊಲೀಸ್ ಬಿಗಿ ಬಂದೋಬಸ್ತ್ ಮಾಡಲಾಗಿದೆ. ಇದೇ ವೇಳೆ, ರಾಮನಗರ ಜಿಲ್ಲೆ, ಮಂಡ್ಯದ ಕೆ.ಆರ್.ಪೇಟೆ, ಮಳವಳ್ಳಿ ಬಂದ್ಗೂ ಕರೆ ನೀಡಲಾಗಿದೆ. ಇದರೊಂದಿಗೆ ಇಂದಿನ ಲೇಟೆಸ್ಟ್ ಅಪ್ಡೇಟ್ಸ್ ಇಲ್ಲಿದೆ.
ಬೆಂಗಳೂರಿನ ಮೈಸೂರು ಬ್ಯಾಂಕ್ ಸರ್ಕಲ್ನಲ್ಲಿ ಹೆಚ್ಚುವರಿ ಪೊಲೀಸರ ನಿಯೋಜನೆ
ಬೆಂಗಳೂರಿನ ಮೈಸೂರು ಬ್ಯಾಂಕ್ ಸರ್ಕಲ್ನಲ್ಲಿ ಇಂದು ಧರಣಿ ಹಿನ್ನೆಲೆಯಲ್ಲಿ ಹೆಚ್ಚುವರಿ ಪೊಲೀಸರನ್ನು ನಿಯೋಜಿಸಲಾಗಿದೆ. 2 ಕೆಎಸ್ಆರ್ ಪಿ, 1 ವಾಟರ್ ಜೆಟ್ ಹಾಗೂ 10 ಕ್ಕೂ ಹೆಚ್ಚು ಬಸ್ಗಳನ್ನು ನಿಯೋಜಿಸಲಾಗಿದೆ. ಟೌನ್ಹಾಲ್ನಿಂದ ಫ್ರೀಡಂ ಪಾರ್ಕ್ನತ್ತ ಬರುವ ರ್ಯಾಲಿಯನ್ನು ಮಾರ್ಗ ಮಧ್ಯದಲ್ಲಿಯೇ ತಡೆಯಲು ಪೊಲೀಸರು ವ್ಯವಸ್ಥೆ ಮಾಡಿದ್ದಾರೆ.
ಬಂದ್ ದಿಕ್ಕು ತಪ್ಪಿಸುವ ಕೆಲಸವಾಗಬಾರದು; ಕುರುಬೂರು ಶಾಂತಕುಮಾರ್
ಬೆಂಗಳೂರು: ಬಂದ್ ದಿಕ್ಕು ತಪ್ಪಿಸುವ ಕೆಲಸವಾಗಬಾರದು. ಜಲ್ಲಿಕಟ್ಟು ಆದಾಗ ತಮಿಳುನಾಡು ಪೋಲಿಸರು ಸಹಕಾರ ನೀಡಿದರು. ಇಲ್ಲಿ ಪೋಲಿಸರು ಪ್ರತಿಭಟನೆ ಮಾಡುವವರಿಗೆ ಕೆಲವೊಂದು ಸಮಸ್ಯೆ ಆಗುತ್ತಿದೆ ಎಂದು ಗೊತ್ತಾಗಿದೆ. ಸದ್ಯದವರೆಗೂ ಬಂದ್ ಯಶಸ್ವಿಯಾಗಿದೆ. ಎಲ್ಲರೂ ಬೆಂಬಲ ನೀಡಿದ್ದಾರೆ. 144 ಸೆಕ್ಷನ್ ಹಾಕಬಾರದಿತ್ತು. ನಮ್ಮ ಹೋರಾಟ, ಚಳುವಳಿ ಇರಲಿದೆ. ಈಗ ಟೌನ್ಹಾಲ್ಗೆ ಹೋಗುತ್ತಿದ್ದೇವೆ. ಇಲ್ಲಿ ಏನೇ ನಡೆದರೂ ಇಡೀ ರಾಜ್ಯಕ್ಕೆ ಸಂದೇಶ ಹೋಗುತ್ತದೆ. ಪೋಲಿಸರು ಎಚ್ಚರಿಕೆಯಿಂದ ಇರಬೇಕು ಎಂದು ಕುರುಬೂರು ಶಾಂತಕುಮಾರ್ ಹೇಳಿದರು.
ರೋಗಿಗಳಿಗೂ ತಟ್ಟಿದ ಬೆಂಗಳೂರು ಬಂದ್ ಎಫಕ್ಟ್
ಬೆಂಗಳೂರು: ಬೆಂಗಳೂರು ಬಂದ್ ಎಫಕ್ಟ್ ರೋಗಿಗಳಿಗೂ ತಟ್ಟಿದೆ. ಶಿವಮೊಗ್ಗದ ಮಾನಸ ಆಸ್ಪತ್ರೆಗೆ ಹೋಗಲು ಆಂಧ್ರಪ್ರದೇಶದಿಂದ ಮೆಜೆಸ್ಟಿಕ್ಗೆ ಪ್ರಯಾಣಿಕರು ಬಂದಿದ್ದಾರೆ. ಇಲ್ಲಿಂದ ಚಿಕಿತ್ಸೆಗಾಗಿ ಶಿವಮೊಗ್ಗ ಹೋಗಲು ನಿರ್ಧರಿಸಿದ್ದಾರೆ. ಆದರೆ ಪ್ರಯಾಣಿಕ ಸಂಖ್ಯೆ ಇಲ್ಲ ಅಂತ ಕೆಎಸ್ಆರ್ಟಿಸಿ ಶಿವಮೊಗ್ಗಕ್ಕೆ ಬಸ್ ಬಿಡುತ್ತಿಲ್ಲ. ಹೀಗಾಗಿ ರೋಗಿಗಳು ಪರದಾಡುತ್ತಿದ್ದಾರೆ.
ಕಾವೇರಿ ಹೋರಾಟ, ಮಳವಳ್ಳಿ ಬಂದ್
ಮಂಡ್ಯ: ಮಂಡ್ಯದಲ್ಲಿ ಕಾವೇರಿ ಹೋರಾಟ ಮುಂದುವರೆದಿದೆ. ತಮಿಳುನಾಡಿನ ನೀರು ಹರಿಸುತ್ತಿರುವುದನ್ನ ವಿರೋಧಿಸಿ ಮಳವಳ್ಳಿ ಬಂದ್ಗೆ ಕರೆ ನೀಡಲಾಗಿದೆ. ಈ ಹಿನ್ನೆಲೆಯಲ್ಲಿ ಬೆಳಗ್ಗೆಯಿಂದಲೇ ಅಂಗಡಿ-ಮುಂಗಟ್ಟುಗಳನ್ನು ಬಂದ್ ಮಾಡಲಾಗಿದೆ. ವ್ಯಾಪಾರ ವಹಿವಾಟು ಸ್ಥಗಿತವಾಗಿದೆ.
ಫ್ರೀಡಂ ಪಾರ್ಕ್ನಲ್ಲಿ ರೈತ ನೇಣು ಹಾಕಿಕೊಳ್ಳುವ ಯತ್ನ
ಬೆಂಗಳೂರು: ತಮಿಳುನಾಡಿಗೆ ಕಾವೇರಿ ನೀರು ಹರಿಸುತ್ತುರುವುದನ್ನು ವಿರೋಧಿ ವಿವಿಧ ಸಂಘಟನೆಗಳು ಬೆಂಗಳೂರು ಬಂದ್ಗೆ ಕರೆಕೊಟ್ಟಿದ್ದು, ಫ್ರೀಡಂ ಪಾರ್ಕ್ನಲ್ಲಿ ಓರ್ವ ರೈತ ಟವಲ್ನಿಂದ ಮರಕ್ಕೆ ನೇಣು ಹಾಕಿಕೊಳ್ಳುವ ಯತ್ನಿಸಿದ್ದಾನೆ.
ಬೆಂಗಳೂರು ಬಂದ್ಗೆ ಬಿಎಂಆರ್ಸಿಎಲ್ ನೈತಿಕ ಬೆಂಬಲ
ಬೆಂಗಳೂರು ಬಂದ್ಗೆ ಬಿಎಂಆರ್ಸಿಎಲ್ ನೈತಿಕ ಬೆಂಬಲ ಸೂಚಿಸಿದೆ. ಬಂದ್ ನಡುವೆಯೂ ನಮ್ಮ ಮೇಟ್ರೋ ಎಂದಿನಂತೆ ಇರಲಿದೆ. ಬೆಳ್ಗೆಯಿಂದಲೇ ನಮ್ಮ ಮೇಟ್ರೋ ಓಡಾಟ ಆರಂಭವಾಗಿದೆ.
ಫ್ರೀಡಂಪಾರ್ಕ್ನಲ್ಲಿ ಮಾತ್ರ ಪ್ರತಿಭಟನೆ ನಡೆಸಲು ಅವಕಾಶ
ಕಾವೇರಿ ನೀರಿನ ವಿಚಾರವಾಗಿ ಇಂದು ಬೆಂಗಳೂರು ಬಂದ್ಗೆ ಕರೆ ಹಿನ್ನೆಲೆಯಲ್ಲಿ ಫ್ರೀಡಂಪಾರ್ಕ್ನಲ್ಲಿ ಮಾತ್ರ ಪ್ರತಿಭಟನೆ ನಡೆಸಲು ಅವಕಾಶ ನೀಡಲಾಗಿದೆ. ಫ್ರೀಡಂಪಾರ್ಕ್ ಹೊರತುಪಡಿಸಿ ಬೇರೆ ಕಡೆ ಧರಣಿಗೆ ಅವಕಾಶವಿಲ್ಲ. ನಗರದ ವಿವಿಧೆಡೆ ಪ್ರತಿಭಟನೆ ನಡೆಸಲು ಮುಂದಾದರೆ ವಶಪಡಿಸಿಕೊಳ್ಳಲು ಪೊಲೀಸರು ನಿರ್ಧರಿಸಿದ್ದಾರೆ.
ರಾಮಗರದಲ್ಲಿ ಜಯ ಕರ್ನಾಟಕ ಸಂಘಟನೆ ಧರಣಿ
ರಾಮನಗರ: ತಮಿಳುನಾಡಿಗೆ ಕಾವೇರಿ ನೀರು ಹರಿಸುತ್ತಿರುವುದನ್ನು ಖಂಡಿಸಿ ರಾಮನಗರದ ಐಜೂರು ಸರ್ಕಲ್ ಬಳಿ ಜಯ ಕರ್ನಾಟಕ ಸಂಘಟನೆ ಧರಣಿ ಮಾಡುತ್ತಿದೆ. ತಮಿಳುನಾಡು ಮುಖ್ಯಮಂತ್ರಿ ಸ್ಟಾಲಿನ್ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಬೆಂಗಳೂರು ಬಂದ್ಗೆ ಕೆಆರ್ಮಾರ್ಕೆಟ್ ವ್ಯಾಪಾರಿಗಳ ಬೆಂಬಲ
ತಮಿಳುನಾಡಿಗೆ ಕಾವೇರಿ ನೀರು ಹರಿಸುವುತ್ತಿರುವುದನ್ನು ವಿರೋಧಿಸಿ ಬೆಂಗಳೂರು ಬಂದ್ಗೆ ಕರೆ ಕೊಟ್ಟಿದ್ದು, ಕೆ.ಆರ್.ಮಾರ್ಕೆಟ್ ವ್ಯಾಪಾರಿಗಳು ಬಂದ್ಗೆ ಬೆಂಬಲ ವ್ಯಕ್ತಪಡಿಸಿದ್ದಾರೆ.
ಬೆಂಗಳೂರು ಬಂದ್ಗೆ ಪೆಟ್ರೋಲ್ ಬಂಕ್ ಒಕ್ಕೂಟ ನೈತಿಕ ಬೆಂಬಲ
ಬೆಂಗಳೂರು ಬಂದ್ಗೆ ಪೆಟ್ರೋಲ್ ಬಂಕ್ ಒಕ್ಕೂಟ ನೈತಿಕ ಬೆಂಬಲ ಸೂಚಿಸಿದೆ. ಆದರೂ ಕೂಡ ಪೆಟ್ರೋಲ್ ಬಂಕ್ಗಳು ಎಂದಿನಂತೆ ಕಾರ್ಯನಿರ್ವಹಿಸುತ್ತಿವೆ.
ಫ್ರೀಡಂಪಾರ್ಕ್ನಲ್ಲಿ ಮಾತ್ರ ಪ್ರತಿಭಟನೆ ನಡೆಸಲು ಅವಕಾಶ
ಕಾವೇರಿ ನೀರಿನ ವಿಚಾರವಾಗಿ ಇಂದು ಬೆಂಗಳೂರು ಬಂದ್ಗೆ ಕರೆ ಹಿನ್ನೆಲೆಯಲ್ಲಿ ಫ್ರೀಡಂಪಾರ್ಕ್ನಲ್ಲಿ ಮಾತ್ರ ಪ್ರತಿಭಟನೆ ನಡೆಸಲು ಅವಕಾಶ ನೀಡಲಾಗಿದೆ. ಫ್ರೀಡಂಪಾರ್ಕ್ ಹೊರತುಪಡಿಸಿ ಬೇರೆ ಕಡೆ ಧರಣಿಗೆ ಅವಕಾಶವಿಲ್ಲ. ನಗರದ ವಿವಿಧೆಡೆ ಪ್ರತಿಭಟನೆ ನಡೆಸಲು ಮುಂದಾದರೆ ವಶಪಡಿಸಿಕೊಳ್ಳಲು ಪೊಲೀಸರು ನಿರ್ಧರಿಸಿದ್ದಾರೆ.
ಬೆಂಗಳೂರು ಬಂದ್, ಶಾಲಾ–ಕಾಲೇಜುಗಳಿಗೆ ರಜೆ
ಬೆಂಗಳೂರು: ಕಾವೇರಿ ನೀರಿನ ವಿಚಾರವಾಗಿ ಇಂದು ಬೆಂಗಳೂರು ಬಂದ್ ಹಿನ್ನೆಲೆಯಲ್ಲಿ ಸಾರಿಗೆ ವ್ಯವಸ್ಥೆಯಲ್ಲಿ ವ್ಯತ್ಯಯವಾಗುವ ಸಾಧ್ಯತೆ ಇದೆ. ಹೀಗಾಗಿ ಜಿಲ್ಲಾ ವ್ಯಾಪ್ತಿಯ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಹಾಗೇ ಶಿಕ್ಷಕರು, ಉಪನ್ಯಾಸಕರಿಗೂ ರಜೆ ಘೋಷಿಸಿ ಜಿಲ್ಲಾಧಿಕಾರಿ ದಯಾನಂದ್ ಆದೇಶ ಹೊರಡಿಸಿದ್ದಾರೆ.
ಟಿ.ನರಸೀಪುರ ಬಂದ್, ಶಾಲೆಗಳಿಗೆ ರಜೆ ಘೋಷಣೆ
ಮೈಸೂರು: ತಮಿಳುನಾಡಿಗೆ ಕಾವೇರಿ ನೀರು ಹರಿಸುತ್ತಿರುವುದಕ್ಕೆ ತೀವ್ರ ವಿರೋಧಿಸಿ ಜಿಲ್ಲೆಯಲ್ಲಿ ರೈತರ ಪ್ರತಿಭಟನೆ ಮುಂದುವರೆದಿದೆ. ಕಾವೇರಿ, ಕಬಿನಿ ಹಿತರಕ್ಷಣಾ ಸಮಿತಿಯಿಂದ ಇಂದು ಟಿ.ನರಸೀಪುರ ಬಂದ್ಗೆ ಕರೆ ನೀಡಲಾಗಿದೆ. ಈ ಹಿನ್ನೆಲೆಯಲ್ಲಿ ಇಂದು ಸರ್ಕಾರಿ ಅನುದಾನ, ಅನುದಾನ ರಹಿತ ಶಾಲೆಗಳಿಗೆ ರಜೆ ಘೋಷಿಸಿ ಟಿ.ನರಸೀಪುರ ಬಿಇಒ ಶೋಭಾ ಆದೇಶ ಹೊರಡಿಸಿದ್ದಾರೆ. ಟಿ.ನರಸೀಪುರ ಬಂದ್ಗೆ 20ಕ್ಕೂ ಹೆಚ್ಚು ಸಂಘಟನೆಗಳು ಬೆಂಬಲ ಸೂಚಿಸಿವೆ.
ಬೆಂಗಳೂರು ಬಂದ್, ಎಂದಿನಂತೆ ಕೆಎಸ್ಆರ್ಟಿಸಿ, ಬಿಎಂಟಿಸಿ ಬಸ್ ಸಂಚಾರ
ಬೆಂಗಳೂರು: ಬೆಂಗಳೂರು ಬಂದ್ ನಡುವೆಯೇ ಎಂದಿನಂತೆ ಬಿಎಂಟಿಸಿ ಮತ್ತು ಕೆಎಸ್ಆರ್ಟಿಸಿ ಸಂಚಾರ ನಡೆಸಿವೆ. ಕೆಎಸ್ಆರ್ಟಿಸಿ ಬಸ್ಗಳು ರಾಜ್ಯದ ವಿವಿಧ ಪ್ರದೇಶಗಳಿಗೆ ಸಂಚಾರ ನಡೆಸುತ್ತಿವೆ. ಹಾಗೇ ಬಿಎಂಟಿಸಿ ಬಸ್ಗಳು ನಗರದ ವಿವಿಧ ಪ್ರದೇಶಗಳಲ್ಲಿ ಸಂಚಾರ ನಡೆಸುತ್ತಿವೆ.