ಕನ್ನಡ ಚಿತ್ರರಂಗದ ಹಿರಿಯ ನಟ ಬ್ಯಾಂಕ್ ಜನಾರ್ಧನ್ಗೆ ಹೃದಯಾಘಾತವಾಗಿದೆ. ಮಣಿಪಾಲ್ ಆಸ್ಪತ್ರೆಯಲ್ಲಿ ಬ್ಯಾಂಕ್ ಜನಾರ್ಧನ್ ಚಿಕಿತ್ಸೆ ಪಡೆಯುತ್ತಿದ್ದಾರೆ. ಬ್ಯಾಂಕ್ ಜನಾರ್ಧನ್ ಅವರಿಗೆ ಐಸಿಯುನಲ್ಲಿ ಚಿಕಿತ್ಸೆ ಮುಂದುವರೆದಿದೆ. ಬ್ಯಾಂಕ್ ಜನಾರ್ದನ್ ರಂಗಭೂಮಿ ಕಲಾವಿದರಾಗಿ ಹೆಸರು ಮಾಡಿದ್ದರು. ಬಳಿಕ ಹಲವು ಕನ್ನಡ ಚಲನಚಿತ್ರಗಳು ಮತ್ತು ಟಿವಿ ಸೀರಿಯಲ್ನಲ್ಲಿ ಹಾಸ್ಯ ನಟನಾಗಿ ನಟಿಸಿ ಜನಪ್ರಿಯರಾಗಿದ್ದಾರೆ.
ಬ್ಯಾಂಕ್ ಜನಾರ್ದನ್ಗೆ 74 ವರ್ಷ ವಯಸ್ಸಾಗಿದೆ. ನಿನ್ನೆ ಸಂಜೆ ಬ್ಯಾಂಕ್ ಜನಾರ್ಧನ್ ಅವರಿಗೆ ಹೃದಯಾಘಾತ ಉಂಟಾಗಿದೆ. ಸದ್ಯ ನಟ ಬ್ಯಾಂಕ್ ಜನಾರ್ದನ್ ಅವರಿಗೆ ಐಸಿಯೂನಲ್ಲಿ ಚಿಕಿತ್ಸೆ ನೀಡಲಾಗ್ತಿದ್ದು, ನಾಳೆ ಜನಾರ್ಧನ್ ಅವರಿಗೆ ಆಂಜಿಯೋಗ್ರಾಮ್ ಮಾಡುವ ಸಾಧ್ಯತೆ ಇದೆ. ಹಿರಿಯನಟ ಬಿರಾದಾರ್ ಸ್ನೇಹಿತನ ನೋಡಲು ಆಸ್ಪತ್ರೆಗೆ ಆಗಿಮಿಸಿದ್ರು. ಜನಾರ್ಧನ್ ಐಸಿಯುನಲ್ಲಿರುವ ಹಿನ್ನೆಲೆ ಯಾರಿಗೂ ನೋಡಲು ಅನುಮತಿ ನೀಡಿಲ್ಲ.