ಬೆಂಗಳೂರು: ಪೊಲೀಸ್ ಭದ್ರತೆ ನಿಯೋಜಿಸಿ ಕರ್ನಾಟಕ ಬಂದ್ ಅನ್ನು ಹತ್ತಿಕ್ಕುವ ಕೆಲಸ ರಾಜ್ಯ ಸರ್ಕಾರ ಮಾಡುತ್ತಿದೆ. ಕಾವೇರಿ ನೀರಿಗಾಗಿ ನಾವು ಕರೆ ನೀಡಿರುವ ಬಂದ್ಗೆ ಉತ್ತಮ ಪ್ರತಿಕ್ರಿಯೆ ದೊರೆತಿದೆ. ಬಂದ್ಗೆ ಸಹಕಾರ ನೀಡಿದ ರಾಜ್ಯದ ಜನತೆ ಧನ್ಯವಾದ ತಿಳಿಸುತ್ತೇನೆ. ಪೊಲೀಸರು ನಮ್ಮ ಕಾರ್ಯಕರ್ತರನ್ನು ಬಂಧಿಸುತ್ತಿದ್ದಾರೆ. ಪೊಲೀಸ್ ಗೂಂಡಾಗಿರಿ, ದೌರ್ಜನ್ಯವನ್ನು ತೀವ್ರವಾಗಿ ಖಂಡಿಸುತ್ತೇವೆ. ಶಾಂತಿಯುತವಾಗಿ ಪ್ರತಿಭಟನೆ, ಮೆರವಣಿಗೆ ಮಾಡಿದರೇ ತಪ್ಪಾ? ಟೌನ್ಹಾಲ್ ಮುಂದೆ ಪ್ರತಿಭಟನೆಗೆ ಅವಕಾಶ ನೀಡದೆ ದೌರ್ಜನ್ಯವೆಸಗಿದ್ದಾರೆ. ರಾಜ್ಯ ಸರ್ಕಾರದ ನಡೆಯನ್ನು ತೀವ್ರವಾಗಿ ಖಂಡಿಸುತ್ತೇನೆ. ನಾನು ಕಪ್ಪು ಬಟ್ಟೆ ಧರಿಸಿ ವಿನೂತನ ರೀತಿಯಲ್ಲಿ ಪ್ರತಿಭಟನೆ ಮಾಡುತ್ತಿದ್ದೇನೆ. ನ್ಯಾಯದೇವತೆ ಧರಿಸುವ ಬಟ್ಟೆ ಅಥವಾ ಬುರ್ಖಾ ಎಂದಾದರೂ ಕರೆಯಲಿ. ನ್ಯಾಯದೇವತೆಯ ಸಂದೇಶ ಸಾರುವ ಬುರ್ಖಾ ಧರಿಸಿದ್ದೇನೆ. ಮಹಿಳೆಯರ ಗೌರವದ ಸಂಕೇತ ಸಾರುವ ಬುರ್ಖಾ ಧರಿಸಿದ್ದೇನೆ. ಕಾವೇರಿ ನದಿ ನೀರು ವಿಚಾರವಾಗಿ ನ್ಯಾಯ ಸಿಗುವವರೆಗೂ ಹೋರಾಟ ಮಾಡುತ್ತೇನೆ ಎಂದು ಹೇಳಿದರು.