ಶಿವಮೊಗ್ಗದಲ್ಲಿ ಈದ್ ಮಿಲಾದ್ ಮೆರವಣಿಗೆ ವೇಳೆ ಗಲಾಟೆ ಪ್ರಕರಣದ ಹಿಂದೆ ಓಲೈಕೆ ರಾಜಕಾರಣ ಇದೆ ಎಂದು ಮಾಜಿ ಸಿಎಂ ಬಸವರಾಜ ಬೊಮ್ಮಾಯಿಹೇಳಿದ್ದಾರೆ. ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸರ್ಕಾರ ಲಾಠಿಚಾರ್ಜ್ ನಡೆಸುವಂತಹ ಪರಿಸ್ಥಿತಿಗೆ ಬರಬಾರದಾಗಿತ್ತು. ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ವಿಫಲವಾಗಿದೆ. ಶಿವಮೊಗ್ಗ ಸೂಕ್ಷ್ಮ ನಗರ, ಹಿಂದೆಯೂ ಇಂತಹ ಘಟನೆಗಳು ನಡೆದಿವೆ. ಧಾರ್ಮಿಕ ಕಾರ್ಯಕ್ರಮಗಳ ವೇಳೆ ಮುಂಜಾಗ್ರತಾ ಕ್ರಮ ಕೈಗೊಂಡಿಲ್ಲ ಎಂದು ಹೇಳಿದ್ದಾರೆ.
ಶಿವಮೊಗ್ಗ ನಗರ 3 ಠಾಣಾ ವ್ಯಾಪ್ತಿಗಳು ಸೂಕ್ಷ್ಮ ಪ್ರದೇಶಗಳಾಗಿದ್ದು, ಈ ಠಾಣೆಗಳಿಗೆ ಸಮರ್ಥ ಅಧಿಕಾರಿಗಳನ್ನು ನಿಯೋಜಿಸಬೇಕು. ಇಲ್ಲದವಾದರೆ ಸಮಾಜಘಾತುಕ ಶಕ್ತಿಗಳಿಗೆ ಕುಮ್ಮಕ್ಕು ನೀಡಿದಂತಾಗುತ್ತೆ. ಜಿಲ್ಲೆಗಳಲ್ಲಿ ಕ್ಲಬ್ಗಳು, ರಿಯಲ್ ಎಸ್ಟೇಟ್ ಮಾಫಿಯಾ ಶುರುವಾಗಿದೆ. ರಾಜ್ಯದಲ್ಲಿ ಶಾಂತಿ ಸುವ್ಯವಸ್ಥೆ ಕಾಪಾಡುವ ಕೆಲಸ ಮಾಡಬೇಕು ಎಂದರು.