ತಮಿಳುನಾಡಿಗೆ ನೀರು ಹರಿಸುತ್ತಿರುವುದನ್ನು ಖಂಡಿಸಿ ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣದಲ್ಲಿ ರೈತರ ಪ್ರತಿಭಟನೆ ಮುಂದುವರಿದಿದೆ. ಶ್ರೀರಂಗಪಟ್ಟಣದ ಕುವೆಂಪು ವೃತ್ತದಿಂದ ತಾಲೂಕು ಕಚೇರಿವರೆಗೆ ನೇಣು ಕುಣಿಕೆ ಹಿಡಿದು ರೈತರು ಬೃಹತ್ ಪ್ರತಿಭಟನಾ ಱಲಿ ನಡೆದಿದೆ. ರಾಜ್ಯಕಾಂಗ್ರೆಸ್ ಸರ್ಕಾರದ ವಿರುದ್ಧ ಧಿಕ್ಕಾರ ಕೂಗಿ ರೈತರ ಆಕ್ರೋಶ ಹೊರ ಹಾಕಿದ್ದಾರೆ.