ಕಾವೇರಿ ನದಿ ನೀರು ಹಂಚಿಕೆ (Cauvery River Water Sharing) ವಿಚಾರವಾಗಿ ತಮಿಳುನಾಡಿಗೆ ಭೇಟಿ ನೀಡಿ ವರದಿ ಸಲ್ಲಿಸುವಂತೆ ಕರ್ನಾಟಕ ಸಂಪುಟ ಸಮಿತಿಗೆ (Cabinet Committee) ಕಾಂಗ್ರೆಸ್ ಹೈಕಮಾಂಡ್ (Congress High Command) ಬುಧವಾರ ಸೂಚನೆ ನೀಡಿದೆ. ಆದಷ್ಟು ಬೇಗ ವರದಿ ನೀಡುವಂತೆ ಸೂಚನೆ ತಿಳಿಸಲಾಗಿದೆ. ಈ ಮಧ್ಯೆ, ಕಂದಾಯ ಸಚಿವ ಕೃಷ್ಣಭೈರೇಗೌಡ ನೇತೃತ್ವದ ರಾಜ್ಯ ಸಂಪುಟ ಸಮಿತಿ ಬುಧವಾರ ಕೇಂದ್ರ ಕೃಷಿ, ಗೃಹ ಕಾರ್ಯದರ್ಶಿ ಭೇಟಿಯಾಗಿ ಮಾತುಕತೆ ನಡೆಸಿದೆ. ರಾಜ್ಯಕ್ಕೆ ಬರ ಪರಿಹಾರ ಬಿಡುಗಡೆ ಮಾಡುವಂತೆ ಮನವಿ ಸಲ್ಲಿಸಲಾಗಿದೆ.