ಶಾಲಾ ಮಕ್ಕಳಿಗೆ ನ.23ರಿಂದ ಮೊಟ್ಟೆಯ ಜತೆಗೆ ವಿಶೇಷ ಪೌಷ್ಠಿಕಾಂಶವುಳ್ಳ ಆಹಾರ ನೀಡಲು ಸಿದ್ಧತೆ ನಡೆಯುತ್ತಿದೆ ತೀರ್ಮಾನಿಸಲಾಗಿದೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದರು.
ಶುಕ್ರವಾರ ಮಾತನಾಡಿ, ರಾಜ್ಯದ ಸರ್ಕಾರಿ ಶಾಲೆಗಳ ಮಕ್ಕಳಿಗಾಗಿ ಈ ಯೋಜನೆ ಜಾರಿಗೊಳಿಸಲಾಗಿದೆ. ಮಕ್ಕಳಿಗೆ ಪೌಷ್ಟಿಕಾಂಶಯುಕ್ತ ಆಹಾರದ ಜತೆಗೆ ಮುಂದಿನ ದಿನಗಳಲ್ಲಿ ಗುಣಮಟ್ಟದ ಶಿಕ್ಷಣ ಕೊಡಲು ಯೋಜನೆ ಸಿದ್ಧಪಡಿಸುತ್ತಿದ್ದು, ಅಜೀಂ ಪ್ರೇಮ್ಜೀ, ಇನ್ಫೋಸಿಸ್ನಂಥ ಖಾಸಗಿ ಸಂಸ್ಥೆಗಳಿಂದ ಶಿಕ್ಷಕರಿಗೆ ತರಬೇತಿ ಕೊಡಿಸಲಾಗುವುದು. ಇದರ ಜತೆಗೆ ಪಠ್ಯಪುಸ್ತಕ ಗಾತ್ರ ಕಡಿಮೆ ಆಗಬೇಕು ಎನ್ನುವ ನಿಟ್ಟಿನಲ್ಲೂ ಚರ್ಚೆ ನಡೆಸಲಾಗುತ್ತಿದೆ ಎಂದು ಮಾಹಿತಿ ನೀಡಿದರು.