‘ನಮ್ಮ ಸರ್ಕಾರ ಬೀಳಿಸಲು ಬಿಜೆಪಿ ಷಡ್ಯಂತ್ರ ರೂಪಿಸುತ್ತಿದ್ದು, ಈ ಬಗ್ಗೆ ನಮಗೆ ಸಂಪೂರ್ಣ ಮಾಹಿತಿ ಇದೆ. ಇದರ ಹಿಂದೆ ದೊಡ್ಡ, ದೊಡ್ಡ ನಾಯಕರು ಕೂಡ ಇದ್ದಾರೆ. ಆದರೆ ಈ ಪ್ರಯತ್ನದಿಂದ ಏನೂ ಆಗುವುದಿಲ್ಲ, ಅವರ ಷಡ್ಯಂತ್ರ ಫಲಿಸಲ್ಲ ಎಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ. ಶನಿವಾರ ಬೆಳಗ್ಗೆ ಹೈದರಾಬಾದ್ಗೆ ತೆರಳುವ ಮೊದಲು ಸದಾಶಿವನಗರ ನಿವಾಸದ ಬಳಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಂಡ್ಯದ ಶಾಸಕ ರವಿ ಗಣಿಗ ಹೇಳಿಕೆ ಕುರಿತು ಪ್ರತಿಕ್ರಿಯೆ ನೀಡಿದರು.
ಬಿಜೆಪಿಯವರು ಆಮಿಷ ಒಡ್ಡಿರುವ ಬಗ್ಗೆ ರವಿ ಗಣಿಗ ಸೇರಿದಂತೆ ಹಲವರು ಮಾಹಿತಿ ನೀಡಿದ್ದಾರೆ. ಹೀಗಾಗಿ ಈ ಷಡ್ಯಂತ್ರದ ಬಗ್ಗೆ ನಮಗೆ ಗೊತ್ತಿದೆ. ಇದರ ಹಿಂದೆ ದೊಡ್ಡ, ದೊಡ್ಡ ನಾಯಕರು ಇದ್ದಾರೆ. ಆದರೆ, ಇದರಿಂದ ಏನೂ ಆಗುವುದಿಲ್ಲ. ಅವರ ಷಡ್ಯಂತ್ರ ಸಫಲವಾಗುವುದಿಲ್ಲ ಎಂದು ಸ್ಪಷ್ಟಪಡಿಸಿದರು.