ರೈತರ ಹಿತಕ್ಕಾಗಿ ರೈತ ಸಾಂತ್ವನ ಯಾತ್ರೆ ಕೈಗೊಳ್ಳುತ್ತಿದ್ದು, ಆ ಮೂಲಕ ಕೇಂದ್ರ ಸರ್ಕಾರದ ಜೊತೆ ರಾಜ್ಯದ ಪರವಾಗಿ ನಾವು ಧ್ವನಿ ಎತ್ತುವ ಕೆಲಸ ಮಾಡುತ್ತಿದ್ದೇವೆ. ಇವರು ಕೇಂದ್ರದ ಕಡೆ ಕೈ ತೋರುವ ಬದಲು ತಮ್ಮ ಕೆಲಸ ಮಾಡಲಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ತಿರುಗೇಟು ನೀಡಿದರು.
ತಾಲೂಕು ಕಚೇರಿಯಲ್ಲಿ ಇ – ಆಡಳಿತ ತಂತ್ರಾಂಶ ಅನುಷ್ಠಾನ ಕಾರ್ಯಕ್ರಮ ಉದ್ಘಾಟಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿ, ನಿನ್ನೆ ಮುಖ್ಯಮಂತ್ರಿ ಸಿದ್ದರಾಮಯ್ಯ ಟ್ವೀಟ್ ಗಮನಿಸಿದ್ದೇನೆ. ನಾನೂ ಕೂಡ ಟ್ವೀಟ್ ಮಾಡಿ ಅವರಿಗೆ ಅಭಿನಂದನೆ ಸಲ್ಲಿಸಿದ್ದೇನೆ. ಕೇಂದ್ರ ಸರ್ಕಾರದಿಂದ ಹಣ ಪಡೆಯುವ ಕೆಲಸ ಆಗಬೇಕು. ಸಿದ್ದರಾಮಯ್ಯನವರು ದೇವೇಗೌಡರು ಪ್ರಧಾನಿ ಜೊತೆ ಚೆನ್ನಾಗಿದ್ದಾರೆ. ಈ ಬಗ್ಗೆ ಚರ್ಚೆ ಮಾಡಲಿ ಅಂತ ಹೇಳಿದ್ದಾರೆ. ಕೇಂದ್ರ ಸರ್ಕಾರದ ಜೊತೆ ರಾಜ್ಯದ ಪರವಾಗಿ ನಾವು ಧ್ವನಿ ಎತ್ತುವ ಕೆಲಸ ಮಾಡುತ್ತಿದ್ದೇವೆ ಎಂದು ಹೇಳಿದರು.