ಕಾಂಗ್ರೆಸ್ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾದ ಐದು ಗ್ಯಾರಂಟಿಗಳಲ್ಲಿ ಅತ್ಯಂತ ಮುಖ್ಯವಾದ ಮನೆಯ ಯಜಮಾನತಿಗೆ ಪ್ರತಿ ತಿಂಗಳು 2 ಸಾವಿರ ರೂಪಾಯಿ ನೀಡುವ ಗೃಹಲಕ್ಷ್ಮೀ ಯೋಜನೆಗೆ ಮೈಸೂರಿನಲ್ಲಿ ಚಾಲನೆ ನೀಡಲಾಗಿತ್ತು. ಈ ವೇಳೆ ನಾಡದೇವತೆ ಚಾಮುಂಡೇಶ್ವರಿಗೆ 2000 ರೂ. ಅರ್ಪಿಸಲಾಗಿತ್ತು. ಇದೀಗ ರಾಜ್ಯ ಸರ್ಕಾರ ಮಹತ್ವದ ಗೃಹಲಕ್ಷ್ಮೀ ಯೋಜನೆಯನ್ನು ಚಾಮುಂಡೇಶ್ವರಿಗೆ ಅರ್ಪಿಸಿದ್ದು, ಪ್ರತಿ ತಿಂಗಳು ದೇವಸ್ಥಾನಕ್ಕೆ 2 ಸಾವಿರ ರೂಪಾಯಿ ನೀಡಲು ನಿರ್ಧರಿಸಿದೆ.
ಚಾಮುಂಡೇಶ್ವರಿ ದೇವಸ್ಥಾನಕ್ಕೆ ಪ್ರತಿ ತಿಂಗಳು ಗೃಹಲಕ್ಷ್ಮೀ ಯೋಜನೆಯ ಹಣ ನೀಡುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರಿಗೆ ಎಂಎಲ್ಸಿ ದಿನೇಶ್ ಗೂಳಿಗೌಡ ಅವರು ಪತ್ರ ಬರೆದಿದ್ದು, ಕಾಂಗ್ರೆಸ್ ಸರ್ಕಾರ ಅದಕ್ಕೆ ಅಸ್ತು ಎಂದಿದೆ.