ಬ್ಯುಸಿನೆಸ್ ವೀಸಾ ಮೇಲೆ ಬೆಂಗಳೂರಿಗೆ ಬಂದು ರಾಮಮೂರ್ತಿನಗರದಲ್ಲಿ ನೆಲೆಸಿದ್ದ ಆಫ್ರಿಕಾ ಮೂಲದ ಲಿಯೋನಾರ್ಡ್ ಎಂಬ ಆರೋಪಿ ಹೊಸ ವರ್ಷಕ್ಕೆ ಮತ್ತೇರಿಸಲು 21 ಕೋಟಿ ಮೌಲ್ಯದ ಡ್ರಗ್ಸ್ ತಂದಿದ್ದು, ಸಿಸಿಬಿ ಪೊಲೀಸರು ಕಾರ್ಯಾಚರಣೆ ನಡೆಸಿ ಆರೋಪಿಯನ್ನು ಬಂಧಿಸಿ ಡ್ರಗ್ಸ್ ವಶಕ್ಕೆ ಪಡೆದಿದ್ದಾರೆ.
ಬ್ಯುಸಿನೆಸ್ ವೀಸಾ ಮೇಲೆ ಬೆಂಗಳೂರಿಗೆ ಬಂದು ರಾಮಮೂರ್ತಿನಗರದಲ್ಲಿ ನೆಲೆಸಿದ್ದ ಆಫ್ರಿಕಾ ಮೂಲದ ಲಿಯೋನಾರ್ಡ್ ಎಂಬ ಆರೋಪಿ ಹೊಸ ವರ್ಷಕ್ಕೆ ಮತ್ತೇರಿಸಲು ಅಪಾರ ಪ್ರಮಾಣದ ಡ್ರಗ್ಸ್ ತಂದಿದ್ದ. ಸಿಸಿಬಿ ಪೊಲೀಸರು ಕಾರ್ಯಾಚರಣೆ ನಡೆಸಿ ಆರೋಪಿಯನ್ನು ಬಂಧಿಸಿ ಡ್ರಗ್ಸ್ ವಶಕ್ಕೆ ಪಡೆದಿದ್ದಾರೆ. ಆರೋಪಿಯು ಬೆಡ್ಶೀಟ್ ಕವರ್, ಸೋಪ್ ಬಾಕ್ಸ್ ಹಾಗೂ ಚಾಕೊಲೇಟ್ ಬಾಕ್ಸ್ನಲ್ಲಿ ಡ್ರಗ್ಸ್ ಸಾಗಾಟ ಮಾಡುತ್ತಿದ್ದ. ಹೊಸ ವರ್ಷಕ್ಕೆ ರೇವ್ ಪಾರ್ಟಿಗೆ ಡ್ರಗ್ಸ್ ಸಾಗಿಸಲು ಮುಂದಾಗಿದ್ದ ವೇಳೆ ಪೊಲೀಸರ ಕೈಗೆ ಸಿಕ್ಕಿಬಿದ್ದಿದ್ದಾನೆ. ರಾಮಮೂರ್ತಿನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.