ಬೆಂಗಳೂರು(ಡಿ.28): ಆಸ್ತಿ ತೆರಿಗೆ ಪಾವತಿ ಮಾಡದ ಹಿನ್ನೆಲೆಯಲ್ಲಿ ನಗರದ ಸಂಪಿಗೆ ರಸ್ತೆಯಲ್ಲಿರುವ ಪ್ರತಿಷ್ಠಿತ ಮಂತ್ರಿ ಮಾಲ್ ಗೆ ಬುಧವಾರ ಬಿಬಿಎಂಪಿ ಅಧಿಕಾರಿಗಳು ಬೀಗ ಹಾಕಿದ್ದಾರೆ.
ಮಂತ್ರಿ ಮಾಲ್ ಮಾಲೀಕರು ಕಳೆದ ಐದು ವರ್ಷದಿಂದ ಸುಮಾರು ₹51 ಕೋಟಿ ಆಸ್ತಿ ತೆರಿಗೆಯನ್ನು ಬಾಕಿ ಉಳಿಸಿಕೊಂಡಿದ್ದಾರೆ. ಆಸ್ತಿ ತೆರಿಗೆ ಪಾವತಿ ಮಾಡುವಂತೆ ಬಿಬಿಎಂಪಿ ಅಧಿಕಾರಿಗಳು ಹಲವು ಬಾರಿ ನೋಟಿಸ್ ನೀಡಿದ್ದಾರೆ. ಆದರೆ ನೋಟಿಸ್ಗೆ ಮಂತ್ರಿ ಮಾಲ್ ಮಾಲೀಕರು ಯಾವುದೇ ಉತ್ತರ ನೀಡಿಲ್ಲ ಹಾಗೂ ಬಾಕಿ ಇರುವ ಆಸ್ತಿ ತೆರಿಗೆಯನ್ನೂ ಪಾವತಿ ಮಾಡಿಲ್ಲ. ಈ ಹಿನ್ನೆಲೆಯಲ್ಲಿ ಬುಧವಾರ ಬಿಬಿಎಂಪಿಯ ಪಶ್ಚಿಮ ವಲಯದ ಕಂದಾಯ ವಿಭಾಗದ ಅಧಿಕಾರಿಗಳು ಇಡೀ ಮಾಲ್ಗೆ ಬೀಗ ಹಾಕಿ ಸೀಜ್ ಮಾಡಿದ್ದಾರೆ.