ಮೈಸೂರು: ಅನಾರೋಗ್ಯದಿಂದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ 56 ವರ್ಷದ ವ್ಯಕ್ತಿ ಮೃತಪಟ್ಟಿದ್ದಾರೆ. ಮೃತ ವ್ಯಕ್ತಿ ಹೃದಯ ಸಂಬಂಧಿ ಸಮಸ್ಯೆ, ಡಯಾಬಿಟಿಸ್ ಹಾಗೂ ರಕ್ತದೊತ್ತಡದಿಂದ ಬಳಲುತ್ತಿದ್ದರು ಎನ್ನಲಾಗಿದ್ದು, ನಾಲ್ಕು ದಿನದ ಹಿಂದೆ ಕೊರೊನಾ ಪಾಸಿಟಿವ್ ಆಗಿತ್ತು. ಇನ್ನು ರೂಪಾಂತರ ಕೊರೊನಾದಿಂದಲೇ ಮೃತರಾಗಿದ್ದಾರೆ ಎಂಬುದರ ಬಗ್ಗೆ ಇನ್ನೂ ವರದಿ ಬಂದಿಲ್ಲ ಎಂದು ಹೇಳಲಾಗಿದೆ.