ಸೇವೆ ಖಾಯಂ ಮಾಡುವಂತೆ ಆಗ್ರಹಿಸಿ ಅತಿಥಿ ಉಪನ್ಯಾಸಕರು ಪಾದಯಾತ್ರೆ ಮಾಡುವ ಕುರಿತು ಪ್ರತಿಕ್ರಿಯಿಸಿರುವ ಸಿಎಂ ಸಿದ್ದರಾಮಯ್ಯ, ಅತಿಥಿ ಉಪನ್ಯಾಸಕರನ್ನು ಖಾಯಂ ಮಾಡುವುದು ಕಷ್ಟದ ಕೆಲಸ ಎಂದಿದ್ದಾರೆ. ಕೊಪ್ಪಳ ವಿಮಾನ ನಿಲ್ದಾಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಅತಿಥಿ ಉಪನ್ಯಾಸಕರೊಂದಿಗೆ ಮಾತನಾಡಿದ್ದರೂ ಪಾದಯಾತ್ರೆ ಮಾಡುತ್ತಿದ್ದಾರೆ. ಅವರನ್ನು ಖಾಯಂ ಮಾಡಿ ಎಂದು ಬೇಡಿಕೆ ಇದೆ. ಖಾಯಂ ಮಾಡುವುದು ಕಾನೂನಿನ ಪ್ರಕಾರ ಕಷ್ಟದ ಕೆಲಸ ಎಂದರು.