ಚಿಕ್ಕಬಳ್ಳಾಪುರ, ಜ.11: ಮುಂಬರುವ ಲೋಕಸಭಾ ಚುನಾವಣೆಗೆ ಸ್ಪರ್ಧಿಸಲು ನಾನು ರೆಡಿ ಇದ್ದೇನೆ. ಹೈಕಮಾಂಡ್ ಸೂಚಿಸಿದರೆ ಈಗಿನಿಂದಲೇ ಸಿದ್ಧತೆ ನಡೆಸುವೆ ಎಂದು ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್ ತಿಳಿಸಿದರು. ಬಿಜೆಪಿ ಪಕ್ಷದಿಂದ ಕೆ ಸುಧಾಕರ್ಗೆ ಟಿಕೆಟ್ ಕೊಟ್ಟರೆ, ಕಾಂಗ್ರೆಸ್ ಪಕ್ಷದಿಂದ ನನಗೆ ಟಿಕೆಟ್ ಕೊಡಲಿ ಸ್ಪರ್ಧೆ ಮಾಡುತ್ತೇನೆ. ಕಳೆದ ವಿಧಾನಸಭಾ ಚುನಾವಣೆಯ ಗೆಲುವಿನಂತೆ ಲೋಕಸಭೆ ಚುನಾವಣೆಯಲ್ಲೂ ಗೆದ್ದು ಬರುತ್ತೇನೆ ಎನ್ನುವ ಮೂಲಕ ಮತ್ತೊಮ್ಮೆ ಮಾಜಿ ಸಚಿವ ಸುಧಾಕರ್ ವಿರುದ್ಧ ಹರಿಹಾಯ್ದರು.