ಕಾಂಗ್ರೆಸ್ನವರು ರಾಮಮಂದಿರ ಉದ್ಘಾಟನೆ ಆಮಂತ್ರಣ ತಿರಸ್ಕರಿಸುವ ಮೊದಲೇ ದೇಶದ ಜನ ಮತ್ತು ರಾಮಭಕ್ತರು ಕಾಂಗ್ರೆಸ್ ಪಕ್ಷವನ್ನ ತಿರಸ್ಕರಿಸಿಯಾಗಿದೆ ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ತಿರುಗೇಟು ನೀಡಿದರು.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಹೇಳಿಕೆಗೆ ಪ್ರತಿಯಾಗಿ ಟ್ವೀಟ್ ಮಾಡಿರುವ ಕೇಂದ್ರ ಸಚಿವ ಜೋಶಿ ಅವರು, ಅಯೋಧ್ಯೆಯಲ್ಲಿ ರಾಜಕೀಯ ಮಾಡಲು, ಅಲ್ಲಿ ನಡೆಯುತ್ತಿರುವುದು 140 ಕೋಟಿ ಭಾರತೀಯರ ಅಸ್ಮಿತೆ ಪ್ರಭು ಶ್ರೀರಾಮನ ಮೂರ್ತಿ ಪ್ರತಿಷ್ಠಾಪನೆ ಹೊರತು ವಿದೇಶಿ ವ್ಯಕ್ತಿಯೊಬ್ಬ ಸ್ಥಾಪಿಸಿದ ಕಾಂಗ್ರೆಸ್ ಪಕ್ಷದ ಚುನಾವಣಾ ರಾಲಿ ಅಲ್ಲ ಎಂದು ಕಾಂಗ್ರೆಸ್ ಅನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.