ಭಾರತದಲ್ಲಿ 2028ರಷ್ಟೊತ್ತಿಗೆ ಭಾರತೀಯ ಅಂತರಿಕ್ಷ ನಿಲ್ದಾಣ ಸ್ಥಾಪನೆಯಾಗಲಿದೆ ಎಂದು ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ(Isro) ಅಧ್ಯಕ್ಷ ಎಸ್ ಸೋಮನಾಥ್, ಭಾರತವು ತನ್ನ ಅಸ್ತಿತ್ವದಲ್ಲಿರುವ ಸಾಮರ್ಥ್ಯಗಳನ್ನು ಬಳಸಿಕೊಂಡು 2028 ರ ವೇಳೆಗೆ ಮೊದಲ ಭಾರತೀಯ ಬಾಹ್ಯಾಕಾಶ ನಿಲ್ದಾಣ ಸ್ಥಾಪಿಸಲು ಮುಂದಾಗಿದೆ ಎಂದಿದ್ದಾರೆ.
ಭಾರತದ ಪ್ರತಿಭೆ ಜಾಗತಿಕ ಮಟ್ಟದಲ್ಲಿ ಸದ್ದು ಮಾಡುತ್ತಿದೆ, ಮುಂದಿನ 5 ರಿಂದ 10 ವರ್ಷಗಳಲ್ಲಿ ಭೂಮಿಯ ಮೇಲಿನ ವಿವಿಧ ಕಾರ್ಯಗಳಿಗಾಗಿ ಕೈಗಾರಿಕೆಗಳು ನೂರಾರು ಬಾಹ್ಯಾಕಾಶ ನೌಕೆಗಳನ್ನು ನಿರ್ಮಿಸಬೇಕಾಗುತ್ತದೆ ಎಂದು ಹೇಳಿದರು. ಭಾರತದ ಮೊದಲ ಬಾಹ್ಯಾಕಾಶ ನಿಲ್ದಾಣವನ್ನು ಸ್ಥಾಪಿಸುವಲ್ಲಿ ಯಶಸ್ವಿಯಾದ ನಂತರ, ನೀವು (ಗಗನಯಾತ್ರಿಗಳು) ಬಂದು ಪ್ರಯೋಗಗಳನ್ನು ನಡೆಸಲು ಪ್ರಯೋಗಾಲಯವಾಗಿ ಅಭಿವೃದ್ಧಿಪಡಿಸಲು ನಾವು ಬಯಸುತ್ತೇವೆ ಎಂದು ಹೇಳಿದ್ದಾರೆ.
2035 ರ ವೇಳೆಗೆ ನಾವು ಮಾನವರನ್ನು ಬಾಹ್ಯಾಕಾಶಕ್ಕೆ ಕಳುಹಿಸಲು ಸಾಧ್ಯವಾಗುತ್ತದೆ ಎಂದು ಅವರು ಹೇಳಿದರು. ಖಗೋಳಶಾಸ್ತ್ರಕ್ಕೆ ಸಂಬಂಧಿಸಿದ ಸಂಶೋಧನೆಗಳನ್ನು ಮಾಡಬಹುದಾದ ಪ್ರಯೋಗಾಲಯಗಳು, ಸಂಸ್ಥೆಗಳು, ವೈಜ್ಞಾನಿಕ ಸಂಸ್ಥೆಗಳನ್ನು ನಾವು ಹೊಂದಿರಲಿದ್ದೇವೆ.
ಮುಂದಿನ ದಿನಗಳಲ್ಲಿ ಭಾರತೀಯ ಬಾಹ್ಯಾಕಾಶ ನಿಲ್ದಾಣದಿಂದ ಹೆಚ್ಚಿನ ಪ್ರಯೋಜನವಾಗಲಿದೆ ಎಂದು ಇಸ್ರೋ ಮುಖ್ಯಸ್ಥರು ಹೇಳಿದ್ದಾರೆ. ಉದ್ಯಮವು ಬಾಹ್ಯಾಕಾಶ ಕ್ಷೇತ್ರದ ಅಭಿವೃದ್ಧಿಗೆ ಕೊಡುಗೆ ನೀಡಲು ಅವಕಾಶವನ್ನು ಪಡೆಯುತ್ತದೆ. ಬಾಹ್ಯಾಕಾಶ ನಿಲ್ದಾಣವನ್ನು ನಿರ್ಮಿಸಲು ಅತ್ಯಾಧುನಿಕ ತಂತ್ರಜ್ಞಾನ ಮತ್ತು ಅವುಗಳನ್ನು ನಿರ್ವಹಿಸುವ ಪ್ರಾವೀಣ್ಯತೆಯ ವಿಚಾರದಲ್ಲಿ ಭಾರೀ ಪ್ರಮಾಣದ ಸಂಪನ್ಮೂಲಗಳನ್ನು ಹೊಂದುವ ಅವಶ್ಯಕತೆಯಿದೆ.