ಚಿಕ್ಕಮಗಳೂರು, ಜ 13: ಕಾಡು ಪ್ರಾಣಿಗಳ ಬೇಟೆಗೆ ಹಾಕಿದ್ದ ಉರುಳಿಗೆ ಸಿಲುಕಿ ಒಂದುವರೆ ವರ್ಷದ ಗಂಡು ಚಿರತೆ ಮೃತಪಟ್ಟಿರುವ ಘಟನೆ ಚಿಕ್ಕಮಗಳೂರು ತಾಲೂಕಿನ ಹುಳಿಯಾರದಹಳ್ಳಿಯಲ್ಲಿ ನಡೆದಿದೆ. ಕಾಡು ಪ್ರಾಣಿಗಳ ಬೇಟೆಗಾಗಿ ಜಮೀನಿನಲ್ಲಿ ಉರುಳು ಹಾಕಲಾಗಿತ್ತು. ಚಿರತೆ ಮಧ್ಯರಾತ್ರಿ ಉರುಳಿಗೆ ಸಿಲುಕಿ ನರಳಾಡುತ್ತಿತ್ತು. ಬೆಳಿಗ್ಗೆ ಉರುಳಿಗೆ ಸಿಲುಕಿದ್ದ ಚಿರತೆಯನ್ನು ರಕ್ಷಿಸಿ, ಅರಣ್ಯ ಇಲಾಖೆಯ ಸಿಬ್ಬಂದಿ ಚಿಕಿತ್ಸೆ ನೀಡಿದ್ದರು. ಚಿಕಿತ್ಸೆ ಫಲಕಾರಿಯಾಗದೆ ಚಿರತೆ ಮೃತಪಟ್ಟಿದೆ. ಚಿಕ್ಕಮಗಳೂರು ಅರಣ್ಯ ವಲಯ ವ್ಯಾಪ್ತಿಯಲ್ಲಿ ಘಟನೆ. ಚಿರತೆ ಕಳೆದ ಎರಡು ತಿಂಗಳಿನಿಂದ ಹುಳಿಯಾರದಹಳ್ಳಿ ಸೇರಿದಂತೆ ವಿವಿಧ ಗ್ರಾಮದಲ್ಲಿ ಸಂಚಾರ ಮಾಡುತ್ತಿತ್ತು.