ಬೆಂಗಳೂರು: ‘MP ಚುನಾವಣೆಯಲ್ಲಿ ಹೆಚ್ಚು ಸ್ಥಾನ ಗೆದ್ದರೆ ಸಿದ್ದರಾಮಯ್ಯ 5 ವರ್ಷ CM’ಆಗಿರುತ್ತಾರೆ ಎಂದು ಹಾಸನದಲ್ಲಿ ಸಿಎಂ ಸಿದ್ದರಾಮಯ್ಯ ಪುತ್ರ ಡಾ.ಯತೀಂದ್ರ ಹೊಸ ಬಾಂಬ್ ಸಿಡಿಸಿದ್ದಾರೆ. ಸದ್ಯ ಈ ಹೇಳಿಕೆ ರಾಜಕೀಯ ವಲಯದಲ್ಲಿ ಭಾರಿ ಚರ್ಚೆಯಾಗುತ್ತಿದೆ. ಕಾಂಗ್ರೆಸ್ನ ಅನೇಕ ನಾಯಕರು ಈ ಬಗ್ಗೆ ಪ್ರತಿಕ್ರಿಯೆಗಳನ್ನು ನೀಡುತ್ತಿದ್ದಾರೆ. ಇದೀಗ ಮಾಜಿ ಶಾಸಕ ಯತೀಂದ್ರ ಹೇಳಿಕೆಗೆ ಸಚಿವ ಡಾ.ಪರಮೇಶ್ವರ್ ಪ್ರತಿಕ್ರಿಯೆ ನೀಡಿದ್ದು ಸಿಎಂ ಮುಂದುವರಿಸುವುದು ಬಿಡುವುದು ನಮ್ಮ ಹೈಕಮಾಂಡ್ ನಿರ್ಧಾರ ಮಾಡ್ತಾರೆ. ಸಿಎಂ ಬಗ್ಗೆ ನಿರ್ಧಾರ ಮಾಡುವುದು ನಾವಲ್ಲ. ಲೋಕಸಭೆ ಚುನಾವಣೆಯಲ್ಲಿ ಕೇವಲ ಸಿಎಂ ಸಿದ್ದರಾಮಯ್ಯ ಮಾತ್ರವಲ್ಲ. ಕೆಪಿಸಿಸಿ ಅಧ್ಯಕ್ಷರು ಸೇರಿದಂತೆ ನಾವೆಲ್ಲರೂ ಒಟ್ಟಾಗಿ ಕೆಲಸ ಮಾಡುತ್ತೇವೆ. ಲೋಕಸಭೆ ಚುನಾವಣೆಯಲ್ಲಿ ಹೆಚ್ಚು ಸ್ಥಾನ ಗೆಲ್ಲಲು ಸಂಕಲ್ಪ ಮಾಡಿದ್ದೇವೆ ಎಂದು ಬೆಂಗಳೂರಿನಲ್ಲಿ ಗೃಹ ಇಲಾಖೆ ಸಚಿವ ಡಾ.ಜಿ.ಪರಮೇಶ್ವರ್ ತಿಳಿಸಿದ್ದಾರೆ.