ಲೋಕಸಭೆ ಚುನಾವಣೆಯಲ್ಲಿ ಹೆಚ್ಚು ಸ್ಥಾನ ಗೆದ್ದರೇ ಸಿದ್ದರಾಮಯ್ಯ 5 ವರ್ಷ ಸಿಎಂ ಆಗಿರಲಿದ್ದಾರೆ ಎಂಬ ಮಾಜಿ ಶಾಸಕ ಯತೀಂದ್ರ ಸಿದ್ದರಾಮಯ್ಯ ಹೇಳಿಕೆ ಕುರಿತು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಪ್ರತಿಕ್ರಿಯಿಸಿದ್ದಾರೆ.ಈ ಕುರಿತು ಮಾತನಾಡಿರುವ ಅವರು, ಈಗಾಗಲೇ ಸಿಎಂ ಬಗ್ಗೆ ಮಾತನಾಡಿದ್ದೇವೆ. ಈ ಬಗ್ಗೆ ಚರ್ಚೆಯಾಗಿದೆ. ಹೀಗಾಗಿ ವೈಯಕ್ತಿಕ ಹೇಳಿಕೆಗಳಿಗೆ ನಾನು ಪ್ರತಿಕ್ರಿಯೆ ನೀಡಲ್ಲ ಎಂದರು. ಇನ್ನು ಹೆಚ್ಚುವರಿ ಡಿಸಿಎಂ ಹುದ್ದೆ ಸೃಷ್ಠಿ ಬಗ್ಗೆ ಸಭೆಯಲ್ಲಿ ಚರ್ಚೆಯಾಗಿಲ್ಲ ಕೇವಲ ಲೋಕಸಭೆ ಚುನಾವಣೆ ಬಗ್ಗೆ ಮಾತ್ರ ಚರ್ಚೆಯಾಗಿದೆ ಎಂದು ಸಚಿವ ಸತೀಶ್ ಜಾರಕಿಹೊಳಿ ತಿಳಿಸಿದರು.