ಜನವರಿ 22 ರಂದು ರಾಮಜನ್ಮಭೂಮಿ ಅಯೋಧ್ಯೆಯಲ್ಲಿ ರಾಮಮಂದಿರ ಉದ್ಘಾಟನೆ ಹಿನ್ನೆಲೆಯಲ್ಲಿ ಅಂದು ರಾಜ್ಯದಲ್ಲೂ ರಜೆ ಘೋಷಣೆ ಮಾಡುವಂತೆ ರಾಜ್ಯ ಕಾಂಗ್ರೆಸ್ ಸರ್ಕಾರಕ್ಕೆ ಮಾಜಿ ಸಚಿವ ಕೆ.ಎಸ್ ಈಶ್ವರಪ್ಪ ಆಗ್ರಹಿಸಿದ್ದಾರೆ. ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಕೆ.ಎಸ್ ಈಶ್ವರಪ್ಪ, ಜನವರಿ 22 ರಂದು ರಾಜ್ಯದಲ್ಲೂ ರಜೆ ಘೋಷಣೆ ಮಾಡಿ ಎಂದು ಸರ್ಕಾರಕ್ಕೆ ಮನವಿ ಮಾಡುತ್ತೇನೆ. ರಾಮಮಂದಿರ ಪ್ರಾಣ ಪ್ರತಿಷ್ಠಾಪನೆಯನ್ನು ರಾಜ್ಯದ ಜನರು ಮನೆಯಿಂದಲೇ ಕೂತು ನೋಡಲಿ. ಮುಸ್ಲೀಮರೂ ಅಯೋಧ್ಯೆಗೆ ಬರುತ್ತಿದ್ದಾರೆ. ರಾಮನ ವಿಷಯದಲ್ಲಿ ರಾಜಕೀಯ ಬೇಡ ಎಂದರು.