ಬೆಂಗಳೂರು : ಬೆಂಗಳೂರಿನಲ್ಲಿರುವ ಬನಶಂಕರಿ ದೇವಸ್ಥಾನದಲ್ಲಿ ಇಂದಿನಿಂದ ಬನಶಂಕರಿ ಅಮ್ಮನವರ 108ನೇ ಜಾತ್ರಾ ಮಹೋತ್ಸವ ಆರಂಭವಾಗಿದೆ. ಜನವರಿ 29ರ ವರೆಗೆ ಬನಶಂಕರಿ ಅಮ್ಮನವರ ಜಾತ್ರಾ ಮಹೋತ್ಸವ ನಡೆಯಲಿದೆ. ಜಾತ್ರಾ ಮಹೋತ್ಸವದ ಹಿನ್ನೆಲೆಯಲ್ಲಿ ಆಡಳಿತ ಮಂಡಳಿ ಹಲವು ಧಾರ್ಮಿಕ ಕಾರ್ಯಕ್ರಮಗಳನ್ನು ಆಯೋಜಿಸಿದ್ದು, ಇದಕ್ಕಾಗಿ ಎಲ್ಲ ಸಿದ್ದತೆಗಳು ಪೂರ್ಣಗೊಂಡಿವೆ. ಪ್ರತಿ ದಿನ ಮುಂಜಾನೆ 5 ಗಂಟೆಗೆ ಅಮ್ಮನವರಿಗೆ ಸುಪ್ರಭಾತ ಸೇವೆ, ವಿಶೇಷ ಪಂಚಾಮೃತ ಅಭಿಷೇಕ ನಡೆಯುತ್ತದೆ.