ಹಾವೇರಿ : ಹಾನಗಲ್ನಲ್ಲಿ ಮಹಿಳೆ ಮೇಲೆ ಗ್ಯಾಂಗ್ರೇಪ್ ವಿಚಾರಕ್ಕೆ ಸಂಬಂಧಿಸಿ ಕಾಂಗ್ರೆಸ್ ಸರ್ಕಾರ ಅತ್ಯಾಚಾರಿಗಳ ಪರ ನಿಂತಿದೆ ಎಂದು ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಈ ಕುರಿತು ಹುಬ್ಬಳ್ಳಿಯಲ್ಲಿ ಮಾತನಾಡಿದ ಅವರು. ‘ನೈತಿಕ ಪೊಲೀಸ್ ಗಿರಿ ಪ್ರಕರಣಗಳೂ ಬಹಿರಂಗವಾಗಿವೆ. ಇಂತಹ ಕೃತ್ಯ ಎಸಗುವ ಗ್ಯಾಂಗ್ ಸಕ್ರಿಯವಾಗಿದೆ. ಕೃತ್ಯಗಳು ನಡೆಯುತ್ತಿದ್ದರೂ ಪೊಲೀಸರು ಕಣ್ಮುಚ್ಚಿ ಕುಳಿತಿದ್ದಾರೆ. ಪ್ರಕರಣವನ್ನು SIT ತನಿಖೆಗೆ ಕೊಡಿ ಅಂದ್ರೂ ಸರ್ಕಾರ ನೀಡ್ತಿಲ್ಲ. ಸುಳ್ಳು ಮೆಡಿಕಲ್ ಎಕ್ಸಾಮಿನ್ ಆಗಿವೆ. ಇದು ಮೆಡಿಕೋ ಲೀಗಲ್ ಕೇಸ್, ಸರ್ಕಾರ ಸಂತ್ರಸ್ತೆ ಬಗ್ಗೆ ಜವಾಬ್ದಾರಿ ತಗೊಬೇಕು. ಸಿಎಂ ಶಾಸಕರಿಗೆ ಹೇಳಿದ್ದೀನಿ ಅಂತಾರೆ. ಅಂದ್ರೆ ಸರ್ಕಾರ ಸತ್ತಿದೆಯಾ? ಆರೋಗ್ಯ ಇಲಾಖೆ ಸತ್ತಿದೆಯಾ ಎಂದು ಕಿಡಿಕಾರಿದ್ದಾರೆ.