ದೇವನಹಳ್ಳಿ, ಜ.20: ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಂದಾಯ ಗುಪ್ತಚರ ನಿರ್ದೇಶನಾಲಯದ ಅಧಿಕಾರಿಗಳು ಭರ್ಜರಿ ಕಾರ್ಯಾಚರಣೆ ನಡೆಸಿದ್ದಾರೆ. ಬೆಂಗಳೂರಿನಿಂದ ದೆಹಲಿಗೆ ಅಕ್ರಮವಾಗಿ ಸಾಗಿಸುತ್ತಿದ್ದ 26 ಕೋಟಿ ಮೌಲ್ಯದ 2.6 ಕೆಜಿ ಕೊಕೇನ್ ವಶಕ್ಕೆ ಪಡೆದಿದ್ದಾರೆ. ಕೊಕೇನ್ ಸಮೇತ ಮಹಿಳೆಯನ್ನ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. ವಶಕ್ಕೆ ಪಡೆದು ಬೆಂಗಳೂರಿನ ಡಿಆರ್ಐ ಕಚೇರಿಯಲ್ಲಿ ಮಹಿಳೆಯ ವಿಚಾರಣೆ ನಡೆಸಲಾಗುತ್ತಿದೆ.
ದೇವನಹಳ್ಳಿ ಬಳಿಯ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಪ್ರವಾಸಿ ವೀಸಾ ಮೆರೆಗೆ ದೇಶಕ್ಕೆ ಬಂದಿದ್ದ ಕೀನ್ಯಾ ಮೂಲದ 36 ವರ್ಷದ ಮಹಿಳೆಯನ್ನು ವಶಕ್ಕೆ ಪಡೆಯಲಾಗಿದೆ. ಮಹಿಳೆ ಲಗೇಜ್ ಬ್ಯಾಗ್ನಲ್ಲಿ ಕೊಕೇನ್ ಮರೆಮಾಚಿ ಬೆಂಗಳೂರಿನಿಂದ ದೆಹಲಿಗೆ ಸಾಗಿಸಲು ಯತ್ನಿಸುತ್ತಿದ್ದಳು. ಈ ವೇಳೆ ಸಿಕ್ಕಿಬಿದ್ದಿದ್ದಾಳೆ. ಇಂಡಿಗೋ ವಿಮಾನದಲ್ಲಿ ದೆಹಲಿಗೆ ತೆರಳಲು ಚೆಕ್ ಇನ್ ಆಗ್ತಿದ್ದ ವೇಳೆ ಸಿಕ್ಕಿಬಿದ್ದಿದ್ದಾಳೆ. ಕೊಕೇನ್ ಸಮೇತ ಮಹಿಳೆಯನ್ನ ವಶಕ್ಕೆ ಪಡೆದ ಅಧಿಕಾರಿಗಳು ಬೆಂಗಳೂರಿನ ಡಿಆರ್ಐ ಕಚೇರಿಯಲ್ಲಿ ವಿಚಾರಣೆ ನಡೆಸುತ್ತಿದ್ದಾರೆ.