ಬೆಂಗಳೂರು : ಜನವರಿ 22 ರಂದು ಅಯೋಧ್ಯೆಯಲ್ಲಿ ರಾಮಮಂದಿರ ಪ್ರಾಣ ಪ್ರತಿಷ್ಠಾಪನೆ ಹಿನ್ನೆಲೆ ಆ ದಿನ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಕಟ್ಟೆಚ್ಚರ ವಹಿಸಲು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ಗೃಹ ಸಚಿವ ಡಾ. ಜಿ ಪರಮೇಶ್ವರ್ ಅವರು ಸೂಚನೆ ನೀಡಿದ್ದಾರೆ. ಯಾವುದೇ ಅಹಿತಕರ ಘಟನೆ ಆಗದಂತೆ ನೋಡಿಕೊಳ್ಳಿ. ಕಾನೂನು ವಿರೋಧಿ ಚಟುವಟಿಕೆ ನಡೆಯದಂತೆ ನೋಡಿಕೊಳ್ಳಲು ಸೂಚಿಸಿದ್ದಾರೆ.ಇನ್ನು ಬೆಂಗಳೂರಿನಾದ್ಯಂತ ಪೊಲೀಸರು ಕಟ್ಟೆಚ್ಚರವಹಿಸಿದ್ದಾರೆ. ಸೂಕ್ಷ್ಮ ಪ್ರದೇಶಗಳಲ್ಲಿ ಖಾಕಿ ಪಡೆ ಕಣ್ಣಿಟ್ಟಿದೆ. ಯಾವುದೇ ರ್ಯಾಲಿಗಳಿಗೆ ಅವಕಾಶ ಇಲ್ಲ. ದೇವಸ್ಥಾನಗಳಲ್ಲಿ ಪೂಜೆ ಪುನಸ್ಕಾರಕ್ಕೆ ಯಾವುದೇ ಅಭ್ಯಂತರ ಇಲ್ಲ. ಸದ್ಯ ಪೊಲೀಸರು ಈಗಾಗಲೇ ಧಾರ್ಮಿಕ ಮುಖಂಡರ ಸಭೆ ಮಾಡಿದ್ದು ಶಾಂತಿ ಸುವ್ಯವಸ್ಥೆ ಕಾಪಾಡುವಂತೆ ಕಿವಿ ಮಾತು ಹೇಳಿದ್ದಾರೆ.