ಹಾಸನ : ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದ ಖಾಸಗಿ ಆಸ್ಪತ್ರೆಯ ಎಕ್ಸ್ ರೇ ರೂಂನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾಗಿರುವಂತಹ ಘಟನೆ ನಗರದ ಶಂಕರಮಠ ರಸ್ತೆಯಲ್ಲಿರುವ ಮಂಜುನಾಥ ಆಸ್ಪತ್ರೆಯಲ್ಲಿ ನಡೆದಿದೆ. ಕೂಡಲೇ ರೋಗಿಗಳನ್ನ ಕುಟುಂಬಸ್ಥರು ಹೊರ ಕರೆತಂದಿದ್ದಾರೆ. ಬೆಂಕಿ ಕಾಣಿಸಿಕೊಂಡಿದ್ದರಿಂದ ರೋಗಿಗಳು ಗಾಬರಿಗೊಂಡಿದ್ದಾರೆ. ಕೂಡಲೇ ಕಿಟಕಿ ಗ್ಲಾಸ್ಗಳನ್ನ ಆಸ್ಪತ್ರೆ ಸಿಬ್ಬಂದಿ ಒಡೆದಿದ್ದಾರೆ. ಸ್ಥಳಕ್ಕೆ ಅಗ್ನಿಶಾಮಕ ದಳ ಆಗಮಿಸಿ ಬೆಂಕಿ ನಂದಿಸಿದ್ದಾರೆ.