ಬೆಂಗಳೂರು, ಜ.22: ರಾಜ್ಯದಲ್ಲಿ ನಡೆದ 545 ಪಿಎಸ್ಐ ನೇಮಕಾತಿ ಲಿಖಿತ ಪರೀಕ್ಷೆಯಲ್ಲಿಅಕ್ರಮ ಎಸಗಿದ ಪ್ರಕರಣ ಸಂಬಂಧ ತನಿಖೆಗೆ ಸರ್ಕಾರವು ಹೈಕೋರ್ಟ್ ನಿವೃತ್ತ ನ್ಯಾಯಮೂರ್ತಿ ಬಿ.ವೀರಪ್ಪ ನೇತೃತ್ವದಲ್ಲಿ ಸಮಿತಿ ರಚಿಸಿತ್ತು. ಅದರಂತೆ ತನಿಖೆ ನಡೆಸಿರುವ ಸಮಿತಿಯು ಇಂದು ಗೃಹಕಚೇರಿ ಕೃಷ್ಣಾದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ತನಿಖಾ ವರದಿಯನ್ನು ನೀಡಿದೆ. ಈ ವೇಳೆ ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿ ಎಲ್.ಕೆ.ಅತೀಕ್, ಸಿಎಂ ರಾಜಕೀಯ ಕಾರ್ಯದರ್ಶಿ ಗೋವಿಂದರಾಜು ಉಪಸ್ಥಿತರಿದ್ದರು.