ಬೆಂಗಳೂರು, ಜ.23: ಶಾಲಾ ಮಕ್ಕಳನ್ನು ಕರೆತರುವ ಎಲ್ಲಾ ಬಗೆಯ ವಾಹನಗಳ ಚಾಲಕರು ಮತ್ತು ಸಹಾಯಕರು ಪೊಲೀಸರಿಂದ ಪಡೆದ ಸನ್ನಡತೆಯ ಪ್ರಮಾಣಪತ್ರವನ್ನು ಸಲ್ಲಿಸುವುದನ್ನು ಶಾಲಾ ಶಿಕ್ಷಣ ಇಲಾಖೆ ಈ ಹಿಂದೆ ಕಡ್ಡಾಯಗೊಳಿಸಿತ್ತು. ಇದೀಗ ಶಾಲಾ ವಾಹನ ಚಾಲಕರ ವಿರುದ್ಧ ಸಂಚಾರಿ ಪೊಲೀಸರು ಕಾರ್ಯಾಚರಣೆಗೆ ಇಳಿದಿದ್ದಾರೆ. ಬೆಂಗಳೂರಿನಲ್ಲಿ ಇಂದು ಬೆಳಗ್ಗೆ 7ರಿಂದ 9.30ರವರೆಗೆ ಶಾಲಾ ವಾಹನಗಳ ತಪಾಸಣೆ ನಡೆಸಿದ್ದು ಬೆಳ್ಳಂಬೆಳಗ್ಗೆ ಮದ್ಯಪಾನ ಮಾಡಿ ಶಾಲಾ ವಾಹನ ಓಡಿಸುತ್ತಿದ್ದ ಚಾಲಕರು ಸಿಕ್ಕಿಬಿದ್ದಿದ್ದಾರೆ. ಕುಡಿದು ವಾಹನ ಚಲಾಯಿಸುತ್ತಿದ್ದವರ ವಿರುದ್ಧ ದೂರು ದಾಖಲಾಗಿದೆ.