ಬೆಂಗಳೂರು : ಗಣರಾಜ್ಯೋತ್ಸವಕ್ಕೆ ಮಾಣಿಕ್ ಷಾ ಪರೇಡ್ ಮೈದಾನದಲ್ಲಿ ಸಿದ್ಧತೆ ಮಾಡಿಕೊಳ್ಳಲಾಗಿದೆ. ಜನವರಿ 26ರ ಬೆಳಗ್ಗೆ 9 ಗಂಟೆಗೆ ರಾಜ್ಯಪಾಲರು ಧ್ವಜಾರೋಹಣ ನೆರವೇರಿಸಲಿದ್ದಾರೆ. ಈ ಬಾರಿ ಗಣರಾಜ್ಯೋತ್ಸವದಲ್ಲಿ ಕೇರಳ ಪೊಲೀಸ್ ಪಡೆ, ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್, ಎನ್ಸಿಸಿ, ಸೇವಾದಳ, ವಿವಿಧ ಶಾಲಾ ತಂಡಗಳು ಸೇರಿದಂತೆ 38 ತುಕಡಿಗಳಲ್ಲಿ ಒಟ್ಟು 1,150 ಜನರು ಭಾಗಿಯಾಗಲಿದ್ದಾರೆ ಎಂದು ಬಿಬಿಎಂಪಿ ಕಮಿಷನರ್ ತುಷಾರ್ ಗಿರಿನಾಥ್ ತಿಳಿಸಿದರು.