ಬಿಹಾರದ ಮಾಜಿ ಮುಖ್ಯಮಂತ್ರಿ ಕರ್ಪೂರಿ ಠಾಕೂರ್ ಗೆ ಮರಣೋತ್ತರ ಭಾರತ ರತ್ನ ಪ್ರಶಸ್ತಿ ಘೋಷಣೆ ಮಾಡಲಾಗಿದೆ. ಠಾಕೂರ್ ಅವರು ಹಿಂದುಳಿದ ವರ್ಗಗಳ ಹೋರಾಟಕ್ಕಾಗಿ ಹೆಸರುವಾಸಿಯಾಗಿದ್ದರು. ಕರ್ಪೂರಿ ಎರಡು ಬಾರಿ ಬಿಹಾರದ ಉಪಮುಖ್ಯಮಂತ್ರಿ, ಎರಡು ಬಾರಿ ಮುಖ್ಯಮಂತ್ರಿ ಮತ್ತು ದಶಕಗಳ ಕಾಲ ವಿರೋಧ ಪಕ್ಷದ ಶಾಸಕ ಮತ್ತು ನಾಯಕರಾಗಿದ್ದರು. 1952 ರಲ್ಲಿ ಮೊದಲ ವಿಧಾನಸಭೆಯಲ್ಲಿ ಚುನಾವಣೆಯಲ್ಲಿ ಗೆದ್ದ ನಂತರ ಅವರು ಬಿಹಾರ ವಿಧಾನಸಭೆ ಚುನಾವಣೆಯಲ್ಲಿ ಸೋತಿಲ್ಲ. ಇನ್ನು ಕರ್ಪೂರಿ ಠಾಕೂರ್ ಅವರಿಗೆ ಭಾರತ ರತ್ನ ಪ್ರಶಸ್ತಿ ನೀಡಿರುವುದಕ್ಕೆ ರಾಷ್ಟ್ರಪತಿಗಳು, ಮೋದಿ ಸೇರಿದಂತೆ ಅನೇಕ ಗಣ್ಯರು ಸಂತಸ ವ್ಯಕ್ತಪಡಿಸಿದ್ದಾರೆ.