ಬೆಂಗಳೂರು, ಜನವರಿ 24: ಭಾರತೀಯರ ವಿಶ್ವ ದಾಖಲೆಯ ಲಿಮ್ಕಾ ಬುಕ್ ಆಫ್ ರೆಕಾರ್ಡ್ಸ್ ಪಟ್ಟಿಯಲ್ಲಿ ವಿಧಾನಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಹೆಸರು ಸೇರ್ಪಡೆ ಮಾಡಲಾಗಿದೆ. ಭಾರತದಲ್ಲಿ ಪ್ರಕಟವಾದ 2024ನೇ ಸಾಲಿನ ವಾರ್ಷಿಕ ಪುಸ್ತಕದಲ್ಲಿ ಸಭಾಪತಿ ಬಸವರಾಜ ಹೊರಟ್ಟಿ ಅವರ ದಾಖಲೆಗಳನ್ನು ಪ್ರಕಟ ಮಾಡಲಾಗಿದೆ. ಬಸವರಾಜ ಹೊರಟ್ಟಿ ಅವರು ವಿಧಾನ ಪರಿಷತ್ ಪ್ರವೇಶಿಸಿ ಇಂದಿಗೆ 43 ವರ್ಷ 201 ದಿನಗಳಾಗಿವೆ. 1980 ರಿಂದ ಸ್ಪರ್ಧಿಸಿದ ಎಲ್ಲಾ ಚುನಾವಣೆಗಳಲ್ಲಿ ಜಯ ಗಳಿಸಿದ ಅಂಕಿ ಸಂಖ್ಯೆಗಳು ಹಾಗೂ ಇನ್ನಿತರ ಮಾಹಿತಿಯನ್ನು ಪ್ರಕಟಿಸಲಾಗಿದೆ. ಈಗಾಗಲೇ 2022ರಲ್ಲಿ ಲಂಡನ್ನ ವರ್ಲ್ಡ್ ಬುಕ್ ಆಫ್ ದಾಖಲೆಗೆ ಬಸವರಾಜ ಹೊರಟ್ಟಿ ಹೆಸರು ಸೇರ್ಪಡೆ ಆಗಿದೆ.
ಬಸವರಾಜ ಹೊರಟ್ಟಿ ಪ್ರಸ್ತುತ ಕರ್ನಾಟಕ ವಿಧಾನ ಪರಿಷತ್ತಿನ ಅಧ್ಯಕ್ಷರಾಗಿದ್ದು, ಜೂನ್ 2022 ರಲ್ಲಿ ಅವರು ದಾಖಲೆಯ ಎಂಟನೇ ಬಾರಿಗೆ ಕರ್ನಾಟಕ ಪಶ್ಚಿಮ ಶಿಕ್ಷಕರ ಕ್ಷೇತ್ರದಿಂದ ವಿಧಾನ ಪರಿಷತ್ತಿಗೆ ಮರು ಆಯ್ಕೆಯಾಗುವು ಮೂಲಕ ಇತಿಹಾಸ ಬರೆದಿದ್ದಾರೆ. ಅವರು 1980 ರಿಂದ ಸದಸ್ಯರಾಗಿ, ಭಾರತದಲ್ಲಿ ಶಾಸಕಾಂಗ ಮಂಡಳಿಯಲ್ಲಿ ದೀರ್ಘಾವಧಿಯ ಸದಸ್ಯರಾಗಿದ್ದಾರೆ.