ಹಾವೇರಿ: ಪ್ರಿಯಕರನೊಬ್ಬ ಮೆಡಿಕಲ್ ಶಾಪ್ನಲ್ಲಿ ಕೆಲಸ ಮಾಡುತ್ತಿದ್ದ ಪ್ರೇಯಸಿಗೆ ಚಾಕು ಇರಿದ ಘಟನೆ ಹಾವೇರಿ ಜಿಲ್ಲೆಯ ಶಿಗ್ಗಾಂವಿ ಪಟ್ಟಣದಲ್ಲಿ ನಡೆದಿದೆ. ಅದೃಷ್ಟವಶಾತ್ ಯುವತಿ ಪ್ರಾಣಾಪಾಯದಿಂದ ಪಾರಾಗಿದ್ದಾಳೆ. ಲಕ್ಷ್ಮೀ(20) ಚಾಕು ಇರಿತಕ್ಕೋಳಗಾದ ಯುವತಿ. ಇನ್ನು ಪ್ರಿಯಕರ ಮಹೇಶ್ ಮೈಸೂರು ಹಾಗೂ ಲಕ್ಷ್ಮೀ 2 ವರ್ಷದಿಂದ ಪರಸ್ಪರ ಪ್ರೀತಿಸುತ್ತಿದ್ದರು. ಈ ನಡುವೆ ಬೇರೆ ಯುವಕನ ಜೊತೆ ಆಕೆ ಸಂಪರ್ಕದಲ್ಲಿದ್ದಾಳೆಂಬ ಅನುಮಾನದಿಂದ ಚಾಕು ಇರಿದಿದ್ದಾನೆ.
ಇದರಿಂದ ತಪ್ಪಿಸಿಕೊಳ್ಳಲು ಯತ್ನಿಸಿದ ಲಕ್ಷ್ಮೀ ಕೈಗೆ ಹಾಗೂ ಎದೆ ಮಧ್ಯಭಾಗಕ್ಕೆ ಸಣ್ಣಪುಟ್ಟ ಗಾಯವಾಗಿದೆ. ಈ ವೇಳೆ ಕೈಗೂ ಮಹೇಶ್ಗೂ ಗಾಯವಾಗಿದೆ. ಕೂಡಲೇ ಲಕ್ಷ್ಮೀಯನ್ನು ಶಿಗ್ಗಾಂವಿ ತಾಲೂಕು ಆಸ್ಪತ್ರೆಗೆ ಸೇರಿಸಿ ಚಿಕಿತ್ಸೆ ಕೊಡಿಸಲಾಗಿದ್ದು, ಇದೀಗ ಡಿಶ್ಚಾರ್ಜ್ ಮಾಡಲಾಗಿದೆ. ಲಕ್ಷ್ಮೀಗೆ ಚಾಕು ಇರಿದ ಮಹೇಶ್ನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಈ ಕುರಿತು ಶಿಗ್ಗಾಂವಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.