ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣವಿದ್ದು, ಚಳಿ ಕೊಂಚ ಕಡಿಮೆಯಾಗಿದೆ, ಅದೇ ಚಾಮರಾಜನಗರದಲ್ಲಿ ಅತ್ಯಂತ ಕನಿಷ್ಠ ಉಷ್ಣಾಂಶ ದಾಖಲಾಗಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿಯಲ್ಲಿ ಒಣಹವೆ ಮುಂದುವರೆಯಲಿದೆ. ಬಳ್ಳಾರಿ ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರದಲ್ಲೂ ಒಣಹವೆ ಮುಂದುವರೆಯಲಿದೆ. ಉತ್ತರ ಒಳನಾಡಿನಲ್ಲಿ ಚಳಿ ಹೆಚ್ಚಿದೆ. ಚಾಮರಾಜನಗರದಲ್ಲಿ 14.1 ಡಿಗ್ರಿ ಸೆಲ್ಸಿಯಸ್ ಅತ್ಯಂತ ಕನಿಷ್ಠ ಉಷ್ಣಾಂಶ ದಾಖಲಾಗಿದೆ.