ಮಂಡ್ಯ : ಮಂಡ್ಯದ ಕೆರಗೋಡುವಿನಲ್ಲಿ ಹನುಮ ಧ್ವಜ ವಿವಾದ ತೀವ್ರ ಸ್ವರೂಪ ಪಡೆದುಕೊಂಡಿದ್ದು, ಮಂಡ್ಯದ ಕಾಂಗ್ರೆಸ್ ಶಾಸಕ ರವಿ ಗಣಿಗ ಅವರ ಫ್ಲೆಕ್ಸ್, ಬ್ಯಾನರ್ ಕಂಡರೆ ಸಾಕು ಕಿತ್ತೆಸೆದು ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಮಂಡ್ಯದ ಮಹಾವೀರ ಸರ್ಕಲ್ನಲ್ಲಿ ಪಾದಯಾತ್ರೆ ವೇಳೆ ಬ್ಯಾನರ್ ಬೆಂಕಿ ಹಚ್ಚುತ್ತಿದ್ದಂತೆಯೇ ಪೊಲೀಸರು ಲಾಠಿ ಚಾರ್ಜ್ ಮಾಡಿದ್ದಾರೆ. ಈ ಹಿನ್ನೆಲೆಯಲ್ಲಿ ಇಬ್ಬರು ಕಾರ್ಯಕರ್ತರ ತಲೆಗೆ ಗಾಯವಾಗಿದೆ. ಇದರಿಂದ ಮತ್ತಷ್ಟು ಆಕ್ರೋಶಗೊಂಡ ಕಾರ್ಯಕರ್ತರು ಬೆಂಗಳೂರು-ಮೈಸೂರು ಹಳೇ ಹೆದ್ದಾರಿಯಲ್ಲಿ ಕುಳಿತು ಪ್ರತಿಭಟನೆ ನಡೆಸಿದ್ದಾರೆ.