ಮೈಸೂರು : ಕಾರು ಮತ್ತು ಬೈಕ್ ನಡುವೆ ಡಿಕ್ಕಿಯಾದ ಪರಿಣಾಮ ಬೈಕ್ ಸವಾರನಿಗೆ ಗಾಯಗಳಾಗಿರುವ ಘಟನೆ ಮೈಸೂರಿನ ಸರಸ್ವತಿಪುರಂನ ಅಗ್ನಿಶಾಮಕ ದಳದ ಕಚೇರಿ ಮುಂದಿರುವ ವೃತ್ತದ ಬಳಿ ನಡೆದಿದೆ. ಕಾರು ಚಲಾಯಿಸುತ್ತಿದ್ದ ಮಹಿಳೆ ಮುಂದೆ ಸಾಗುತ್ತಿದ್ದ ವಾಹನವನ್ನು ಓವರ್ ಟೇಕ್ ಮಾಡುವ ಭರದಲ್ಲಿ ಏಕಲವ್ಯ ವೃತ್ತದಿಂದ ಅಗ್ನಿಶಾಮಕ ದಳ ಕಚೇರಿಯತ್ತ ಸಾಗುತ್ತಿದ್ದ ಬೈಕ್ ಸವಾರನಿಗೆ ಕಾರು ಡಿಕ್ಕಿ ಹೊಡೆದಿದೆ. ಡಿಕ್ಕಿ ರಭಸಕ್ಕೆ ಬೈಕ್ ಸವಾರನಿಗೆ ಗಂಭೀರ ಗಾಯಗಳಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಸಂಬಂಧ ಕೆ ಆರ್ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.