ಹಾಸನ : ಇತ್ತೀಚಿಗೆ ಹೆದ್ದಾರಿಗಳಲ್ಲಿ ಬೈಕ್ ವ್ಹೀಲಿಂಗ್ ಮಾಡುವರ ಹಾವಳಿ ಹೆಚ್ಚಾಗಿದೆ. ಹಾಸನ ಮೈಸೂರು ರಾಷ್ಟ್ರೀಯ ಹೆದ್ದಾರಿ 373ರಲ್ಲಿ ಪುಂಡರು ವ್ಹೀಲಿಂಗ್ ಮಾಡಿ ವಾಹನ ಸವಾರರಿಗೆ ಕಾಟ ಕೊಡುತ್ತಿರುವ ವಿಡಿಯೋ ವೈರಲ್ ಆಗಿದೆ. ಒಂದು ಬೈಕ್ನಲ್ಲಿ 2-3 ಜನ ಕೂತು ರಸ್ತೆ ಮಧ್ಯೆ ವ್ಹೀಲಿಂಗ್ ಮಾಡಿದ್ದಾರೆ. ನಾಲ್ಕೈದು ಬೈಕ್ಗಳಲ್ಲಿ ಬಂದ ಯುವಕರು ವ್ಹೀಲಿಂಗ್ ಮಾಡುತ್ತಾ ಇತರೆ ಸವಾರರಿಗೆ ತೊಂದರೆ ಕೊಡುತ್ತಿದ್ದಾರೆ. ರಸ್ತೆಯಲ್ಲಿ ಬರುವ ಇತರೆ ವಾಹನಗಳಿಗೆ ದಾರಿ ಬಿಡದೆ ಪುಂಡಾಟವಾಡುತ್ತಿದ್ದಾರೆ. ಯುವಕರು ವ್ಹೀಲಿಂಗ್ ಮಾಡುತ್ತಿರುವ ದೃಶ್ಯವನ್ನು ಕಾರಿನಲ್ಲಿ ಪ್ರಯಾಣಿಸುತ್ತಿರುವ ಪ್ರಯಾಣಿಕರು ತಮ್ಮ ಮೊಬೈಲ್ ಕ್ಯಾಮೆರಾದಲ್ಲಿ ಸೆರೆ ಹಿಡಿದಿದ್ದು, ಕ್ರಮಕೈಗೊಳ್ಳುವಂತೆ ಆಗ್ರಹಿಸಿದ್ದಾರೆ.