ಮೈಸೂರು : ಬಿಜೆಪಿ ಹೆಸರಿಗೆ ಮಾತ್ರ ರಾಮರಾಜ್ಯ ಅನ್ನುತ್ತಾರೆ, ಆದರೆ ಮಾಡುವುದೆಲ್ಲ ಅಧರ್ಮದ ಕೆಲಸ ಎಂದು ಮೈಸೂರಿನಲ್ಲಿ ಸಚಿವ ದಿನೇಶ್ ಗುಂಡೂರಾವ್ ಹೇಳಿಕೆ ನೀಡಿದ್ದಾರೆ. ‘ಮೋದಿ ಪ್ರಧಾನಿ ಆದ ದಿನದಿಂದಲೇ ಪ್ರಜಾಪ್ರಭುತ್ವದ ಕಗ್ಗೊಲೆ ಶುರುವಾಗಿದೆ. ಸರ್ವಾಧಿಕಾರಿ ಧೋರಣೆ ಎದ್ದು ಕಾಣುತ್ತಿದೆ. ಅವರ ವಿರುದ್ದ ಮಾತನಾಡಿದವರನ್ನು ಮುಗಿಸುವ, ಹೆದರಿಸುವ ಬೆದರಿಸುವ ಕೆಲಸ ಮಾಡಲಾಗುತ್ತಿದೆ. ಬಿಜೆಪಿಯವರೇ ಬಿಜೆಪಿ ಕೇಂದ್ರ ಮುಖಂಡರನ್ನು ಪ್ರಶ್ನೆ ಮಾಡುವ ಪರಿಸ್ಥಿತಿ ಇಲ್ಲ.ಮಾಡಿದರೆ ಅವರನ್ನು ಮುಗಿಸುವ ಕೆಲಸ ಮಾಡಲಾಗುತ್ತದೆ. ಯಾವ ತನಿಖಾ ಸಂಸ್ಥೆಗಳು ರಾಜ್ಯಪಾಲರು ಸ್ವತಂತ್ರವಾಗಿಲ್ಲ. ಚುನಾವಣೆ ಬಂದಾಗ ಇವೆಲ್ಲವನ್ನು ಬಳಸಿಕೊಳ್ಳುವ ಕೆಲಸ ಮಾಡಲಾಗುತ್ತಿದೆ ಎಂದು ದಿನೇಶ್ ಗುಂಡೂರಾವ್ ಹೇಳಿದ್ದಾರೆ.