ಕಳೆದ ವರ್ಷ ನವೆಂಬರ್ ನಲ್ಲಿ ವೈಟ್ಫೀಲ್ಡ್ ನ ಕಾಡುಗೋಡಿಯಲ್ಲಿ ಪಾದಾಚಾರಿ ಮಾರ್ಗದಲ್ಲಿ ವಿದ್ಯುತ್ ತಂತಿ ತುಳಿದು ತಾಯಿ-ಮಗು ಮೃತಪಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದಿನ ಸಚಿವ ಕೆ.ಜೆ ಜಾರ್ಜ್ ರಾಜೀನಾಮೆಗೆ ವಿಪಕ್ಷ ನಾಯಕ ಆರ್.ಅಶೋಕ್ ಆಗ್ರಹಿಸಿದ್ದಾರೆ ಈ ಕುರಿತು ಟ್ವೀಟ್ ಮಾಡಿರುವ ಆರ್. ಅಶೋಕ್, ಬೆಂಗಳೂರಿನಲ್ಲಿ ಕಳೆದ ನವೆಂಬರ್ ನಲ್ಲಿ ವಿದ್ಯುತ್ ತಂತಿ ಸ್ಪರ್ಶಿಸಿ ತಾಯಿ-ಮಗು ಮೃತಪಟ್ಟ ಪ್ರಕರಣಕ್ಕೆ ‘ಇಲಿ’ ಕಾರಣ ಎಂಬ ಬೇಜವಾಬ್ದಾರಿ ಹೇಳಿಕೆ ನೀಡಿದ್ದ ಸಚಿವ ಜಾರ್ಜ್ ಅವರ ಹೊಣೆಗೇಡಿತನ ಈಗ ತನಿಖಾ ವರದಿಯಲ್ಲಿ ಬಯಲಾಗಿದೆ. ಕಾಂಗ್ರೆಸ್ ಸರ್ಕಾರದಲ್ಲಿ ಸಾಮಾನ್ಯ ಜನರ ಜೀವಕ್ಕೆ ಬೆಲೆಯೇ ಇಲ್ಲದಂತಾಗಿದ್ದು, ಸಿಎಂ ಸಿದ್ದರಾಮಯ್ಯ ನವರು ಈ ಕೂಡಲೇ ಸಚಿವ ಕೆ.ಜೆ.ಜಾರ್ಜ್ ಅವರ ರಾಜೀನಾಮೆ ಪಡೆದುಕೊಂಡು ತಪ್ಪಿತಸ್ಥ ಅಧಿಕಾರಿಗಳ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ.