ಬೆಂಗಳೂರು : ವಿಧಾನಸೌಧ ಆವರಣದಲ್ಲಿ ಸಿಎಂ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ರಾಜ್ಯ ಮಟ್ಟದ ಜನಸ್ಪಂದನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದ್ದು ವಿವಿಧ ಜಿಲ್ಲೆಗಳಿಂದ ಸಾವಿರಾರು ಸಂಖ್ಯೆಯಲ್ಲಿ ಜನ ಸಾಗರವೇ ಹರಿದುಬಂದಿದೆ. ಈ ಕಾರ್ಯಕ್ರಮಕ್ಕೆ ಸಾರ್ವಜನಿಕರಿಂದ ಉತ್ತಮ ಸ್ಪಂದನೆ ಮತ್ತು ಪ್ರಶಂಸೆ ವ್ಯಕ್ತವಾಗಿದೆ. ಇಂದು ಬೆಳಗ್ಗೆಯಿಂದಲೇ ಸಾವಿರಾರು ಜನ ತಮ್ಮ ಸಮಸ್ಯೆಯನ್ನು ಸಿಎಂ ಸಿದ್ದರಾಮಯ್ಯನವರ ಬಳಿ ಹೇಳಲು ವಿಧಾನಸೌಧಕ್ಕೆ ಆಗಮಿಸಿದ್ದಾರೆ. ಖುದ್ದಾಗಿ ಸಿಎಂ ಸಿದ್ದರಾಮಯ್ಯ ಅಹವಾಲು ಸ್ವೀಕರಿಸಲಿದ್ದು ಸಮಸ್ಯೆಗೆ ಸ್ಥಳದಲ್ಲೇ ಪರಿಹಾರ ನೀಡಲಿದ್ದಾರೆ. ಬೆಳಗ್ಗೆ 10 ಗಂಟೆಯಿಂದ ಸಂಜೆ 6ರವರೆಗೆ ಜನಸ್ಪಂದನ ಕಾರ್ಯಕ್ರಮ ನಡೆಯಲಿದೆ.