ಮೈಸೂರು : ಮಂಡ್ಯದ ಕೆರೆಗೋಡು ಧ್ವಜ ತೆರವು ವಿರೋಧಿಸಿ ಬಂದ್ ವಿಚಾರಕ್ಕೆ ಸಂಬಂಧಿಸಿದಂತೆ ಮೈಸೂರಿನಲ್ಲಿ ವಿಧಾನಪರಿಷತ್ ಸದಸ್ಯ ಹೆಚ್ ವಿಶ್ವನಾಥ್ ಪ್ರತಿಕ್ರಿಯೆ ನೀಡಿದ್ದು, ‘ಬಿಜೆಪಿಗೆ ಸುಳ್ಳೇ ಮನೆದೇವ್ರು. ಗಲಾಟೆ, ಗದ್ದಲ ಸೃಷ್ಟಿಸುವುದರಲ್ಲಿ ಬಿಜೆಪಿಗರು ನಿಸ್ಸೀಮರು. ಧಾರ್ಮಿಕ ಭಾವನೆಗಳನ್ನು ಮುಂದಿಟ್ಟು ಜನರಿಗೆ ಮಂಕುಬೂದಿ ಎರಚುತ್ತಿದ್ದಾರೆ. ಮಂಡ್ಯದಲ್ಲಿ ಬೆಂಕಿ ಹಚ್ಚಿ, ಆ ಬೆಂಕಿಯಲ್ಲಿ ಮೈ ಕಾಯಿಸಿಕೊಳ್ಳುವ ಕೆಲಸ ಮಾಡುತ್ತಿದ್ದಾರೆ. ಮಂಡ್ಯದ ಜನರು ಮುಗ್ದರು, ಅವರಲ್ಲಿ ಅಶಾಂತಿ ಮೂಡಿಸಲು ಬಿಜೆಪಿ ಮುಂದಾಗಿದೆ. ಮಂಡ್ಯದ ಜನರನ್ನು ದುರುಪಯೋಗಪಡಿಸಿಕೊಳ್ಳುತ್ತಿದ್ದಾರೆ ಎಂದು ವಾಗ್ದಾಳಿ ನಡೆಸಿದರು.