ಲಾಹೋರ್: ಪಾಕಿಸ್ತಾನದಲ್ಲಿ ನಡೆದ ಸಾರ್ವತ್ರಿಕ ಚುನಾವಣಾ ಫಲಿತಾಂಶ ಪ್ರಕಟವಾಗಿ ಅತಂತ್ರ ಸ್ಥಿತಿ ನಿರ್ಮಾಣವಾದ ಬೆನ್ನಲ್ಲೇ ವಿವಿಧ ಪ್ರಕರಣಗಳಲ್ಲಿ ಶಿಕ್ಷೆಗೆ ಗುರಿಯಾಗಿ ಜೈಲು ಪಾಲಾಗಿದ್ದ ಪಾಕ್ ಮಾಜಿ ಪ್ರಧಾನಿ 12 ಪ್ರಕರಣಗಳಲ್ಲಿ ಜಾಮೀನು ಪಡೆದಿದ್ದಾರೆ.
ಮೇ 9ರ ಗಲಭೆಗೆ ಸಂಬಂಧಿಸಿದ 12 ಪ್ರಕರಣಗಳಲ್ಲಿ ಪಾಕ್ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಹಾಗೂ ಮಾಜಿ ವಿದೇಶಾಂಗ ಸಚಿವ ಶಾ ಮಹಮೂದ್ ಖುರೇಷಿಗೆ ಜಾಮೀನು ದೊರೆತಿದೆ. ಕಳೆದ ವರ್ಷ ಮೇ ತಿಂಗಳಲ್ಲಿ ಸೇನಾ ನೆಲೆಗಳ ಮೇಲಿನ ದಾಳಿಗೆ ಸಂಬಂಧಿಸಿದ 12 ಪ್ರಕರಣಗಳಲ್ಲಿ ಪಾಕಿಸ್ತಾನದ ಭಯೋತ್ಪಾದನಾ ವಿರೋಧಿ ನ್ಯಾಯಾಲಯವು ಮಾಜಿ ಪ್ರಧಾನಿ ಇಮ್ರಾನ್ ಖಾನ್ ಮತ್ತು ಮಾಜಿ ವಿದೇಶಾಂಗ ಸಚಿವ ಶಾ ಮೆಹಮೂದ್ ಖುರೇಷಿಗೆ ಶಿಕ್ಷೆ ವಿಧಿಸಿತ್ತು. ಇದೀಗ ಉಭಯ ನಾಯಕರಿಗೂ ಜಾಮೀನು ಮಂಜೂರಾಗಿದೆ.