ಹಾಸನ : ನರೇಂದ್ರ ಮೋದಿ ಅವರು 3ನೇ ಬಾರಿ ಪ್ರಧಾನಿ ಆಗುವುದನ್ನು ಯಾರಿಂದಲೂ ತಪ್ಪಿಸಲು ಆಗದು ಎಂದು ಜೆಡಿಎಸ್ ನಾಯಕ ಹೆಚ್ಡಿ ಕುಮಾರಸ್ವಾಮಿ ಹೇಳಿದ್ದಾರೆ. ಹಾಸನ ತಾಲ್ಲೂಕಿನ ಚನ್ನಂಗಿಹಳ್ಳಿ ಗ್ರಾಮದಲ್ಲಿ ದೇವಾಲಯ ಪ್ರತಿಷ್ಠಾಪನೆ ಕಾರ್ಯಕ್ರಮದಲ್ಲಿ ಭಾಗಿಯಾಗಿ ಮಾತನಾಡಿದ ಅವರು, ಬಿಜೆಪಿ – ಜೆಡಿಎಸ್ ಮೈತ್ರಿ ಸೀಟು ಹಂಚಿಕೆಯ ಬಗ್ಗೆ ಸಮಸ್ಯೆ ಇಲ್ಲ. ಹಾಸನ ಜಿಲ್ಲೆಯಲ್ಲೂ ಜೆಡಿಎಸ್ ಅಭ್ಯರ್ಥಿ ಗೆಲ್ಲಬೇಕು. ಸಣ್ಣಪುಟ್ಟ ಸಮಸ್ಯೆಗಳಿವೆ, ಅದೆಲ್ಲವನ್ನೂ ಸರಿಪಡಿಸಿಕೊಳ್ಳುತ್ತೇವೆ. ಮಂಡ್ಯ ಜಿಲ್ಲೆಯ ಪ್ರತಿದಿನ ಒಂದು ಧಾರವಾಹಿ ಇರಲೇಬೇಕು. ನಿಖಿಲ್ನನ್ನು ರಾಜಕೀಯವಾಗಿ ಮುಗಿಸಲು ಯಾವ ರೀತಿ ಮಾಡಿದ್ದರು? ಒಂದು ತಿಂಗಳಿನಿಂದ ಧಾರವಾಹಿ ನಡೆಯುತ್ತಿದೆ ಎಂದು ಹೇಳಿದರು.