ಹಾಸನ : ಲೋಕಸಭೆ ಚುನಾವಣೆ ಹತ್ತಿರವಾಗುತ್ತಿದ್ದಂತೆ ರಾಜ್ಯ ರಾಜಕೀಯದಲ್ಲಿ ಮಹತ್ತರ ಬೆಳವಣಿಗೆಗಳು ನಡೆಯುತ್ತಿವೆ. ಬಿಜೆಪಿ ಮಿತ್ರಕೂಟದಲ್ಲಿ ಜೆಡಿಎಸ್ ವಿಲೀನವಾದ ಬಳಿಕ ಮಾಜಿ ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿ ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸುತ್ತಾರೆ, ಕೇಂದ್ರದಲ್ಲಿ ಮಂತ್ರಿಯಾಗುತ್ತಾರೆ ಎಂಬ ಮಾತುಗಳು ಕೇಳಿ ಬರುತ್ತಿವೆ. ಆದರೆ ಇದೀಗ ಹೆಚ್.ಡಿ ಕುಮಾರಸ್ವಾಮಿ ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸಲ್ಲ ಎಂದು ಪರೋಕ್ಷವಾಗಿ ಹೇಳಿದ್ದಾರೆ. “ಲೋಕಸಭಾ ಚುನಾವಣೆಗೆ ಸ್ಪರ್ಧಿಸುವ ಬಗ್ಗೆ ನಾನು ಯೋಚಿಸಿಲ್ಲ. ರಾಜ್ಯ ಬಿಟ್ಟು ಏಕೆ ಕಳಿಸುತ್ತೀರಿ, ರಾಜ್ಯದಲ್ಲೇ ಇರೋಣ ಅಂದುಕ್ಕೊಂಡಿದ್ದೇನೆ” ಎಂದರು.