ಹಾಸನ : ಹಾಸನದ ಕ್ಯಾನ್ಸರ್ ಸೆಂಟರ್ನಲ್ಲಿ ಸೌಲಭ್ಯಗಳಿದ್ದರೂ ರೋಗಿಗಳಿಗೆ ಚಿಕಿತ್ಸೆ ಸಿಗದ ಪರಿಸ್ಥಿತಿ ನಿರ್ಮಾಣವಾಗಿದೆ. ತಜ್ಞ ವೈದ್ಯರು, ಸಿಬ್ಬಂದಿ ಕೊರತೆಯಿಂದ ಕ್ಯಾನ್ಸರ್ ರೋಗಿಗಳು ನರಳಾಡುವಂತಾಗಿದೆ. ಎರಡು ದಶಕದ ಹಿಂದೆ ಹಾಸನದಲ್ಲಿ ಮೆಡಿಕಲ್ ಕಾಲೇಜ್ ಸ್ಥಾಪನೆಯಾದರೂ ಪೂರ್ಣಪ್ರಮಾಣದಲ್ಲಿ ಕ್ಯಾನ್ಸರ್ ವಿಭಾಗ ಕಾರ್ಯಾಚರಣೆ ಆರಂಭಿಸಿಲ್ಲ. ಅಂಕಾಲಜಿ ವಿಭಾಗಕ್ಕೆ ವೈದ್ಯರು ಹಾಗೂ ಸಿಬ್ಬಂದಿ ಕೊರತೆಯಿಂದ ಸಂಕಷ್ಟ ಎದುರಿಸುವಂತಾಗಿದೆ. ನಿತ್ಯ ನೂರಾರು ಹೊರ ರೋಗಿಗಳು ಆಸ್ಪತ್ರೆಗೆ ಬಂದರೂ ಸೌಲಭ್ಯ ಸಿಗುತ್ತಿಲ್ಲ. ಸಂಬಂಧಪಟ್ಟ ಅಧಿಕಾರಿಗಳು ಕೂಡಲೇ ಇತ್ತ ಗಮನಹರಿಸುವಂತೆ ಸಾರ್ವಜನಿಕರು ಆಗ್ರಹಿಸಿದ್ದಾರೆ.